More

    ಮನುಕುಲದ ಶ್ರೇಯಸ್ಸಿಗೆ ಎಲ್ಲರೂ ಶ್ರಮಿಸಬೇಕು

    ಜೇವರ್ಗಿ: ಕರೊನಾ ವೈರಸ್ನಿಂದ ದೇಶವೇ ನಲುಗಿ ಹೋಗಿದ್ದು, ಇಂಥ ಸಂದರ್ಭದಲ್ಲಿ ಮನುಕುಲದ ಉದ್ಧಾರಕ್ಕಾಗಿ ಪ್ರತಿಯೊಬ್ಬರು ಮಾನವೀಯತೆ ಮೆರೆಯಬೇಕಾಗಿದೆ. ಅಂತೆಯೆ ತಾಲೂಕಿನ ನಿರ್ಗತಿಕ ಕುಟುಂಬಗಳಿಗೆ ಧರ್ಮಸಿಂಗ್ ಫೌಂಡೇಷನ್ವತಿಯಿಂದ ಅನ್ನದಾಸೋಹದ ಸೇವೆ ಮಾಡಲಾಗುತ್ತಿದೆ ಎಂದು ಶಾಸಕ ಡಾ.ಅಜಯಸಿಂಗ್ ಹೇಳಿದರು.
    ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ತಾಲೂಕಿನಲ್ಲಿರುವ ಸುಮಾರು 9857 ನಿರ್ಗತಿಕರಿಗೆ ಧರ್ಮಸಿಂಗ್ ಫೌಂಡೇಷನ್ ವತಿಯಿಂದ ಪ್ರತಿ ಮನೆ ಮನೆಗೆ ದಿನಾಲು ಎರಡು ಹೊತ್ತು ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ಹಳ್ಳಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲು ಗ್ರಾಪಂ ಮಟ್ಟದಲ್ಲಿ ಆಹಾರದ ಪೊಟ್ಟಣಗಳನ್ನು ತಯಾರಿಸಿ ನಿರ್ಗತಿಕರಿಗೆ ನೀಡಲಾಗುತ್ತಿದೆ. ಇಲ್ಲಿಯವರೆಗೆ 42 ಗ್ರಾಪಂ ವ್ಯಾಪ್ತಿಯಲ್ಲಿ 1.35ಲಕ್ಷ ಆಹಾರದ ಪೊಟ್ಟಣಗಳನ್ನು ವಿತರಿಸಲಾಗಿದೆ. ಪಕ್ಷದ ಕಾರ್ಯಕರ್ತರು, ಆಶಾ, ಅಂಗನವಾಡಿ ಕಾರ್ಯಕರ್ತರು, ಗ್ರಾಪಂ ಸಿಬ್ಬಂದಿ ಸಹಕಾರದೊಂದಿಗೆ ಮನೆ ಮನೆಗೆ ತಲುಪಿಸಲು ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಬೇರೆ ಬೇರೆ ರಾಜ್ಯಗಳಿಂದ ಬಂದವರ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
    ತಾಲೂಕಿನಲ್ಲಿ ಬರ ನಿರ್ವಹಣೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿರುವ ಹಲವಾರು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ಅವಶ್ಯಕತೆ ಇರುವ ಕಡೆಗಳಲ್ಲಿ ಬೋರವೆಲ್ ಕೊರೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೃಷಿ ಚಟುವಟಿಕೆಗಾಗಿ ರೈತರಿಗೆ ಕೃಷಿ ಪರಿಕರಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕರು ಹೇಳಿದರು. ತಹಸೀಲ್ದಾರ್ ಸಿದ್ಧರಾಯ ಬೋಸಗಿ, ತಾಪಂ ಇಒ ವಿಶಾಲರಾಜ, ಆಹಾರ ಇಲಾಖೆ ಅಧಿಕಾರಿ ಡಿಬಿ ಪಾಟೀಲ್, ಪುರಸಭೆ ಮುಖ್ಯಾಧಿಕಾರಿ ಲಕ್ಷ್ಮೇಶ, ಅಪರಾಧ ವಿಭಾಗದ ಪಿಎಸ್ಐ ಸಂಗಮೇಶ ಅಂಗಡಿ, ಮುಖಂಡರಾದ ರಾಜಶೇಖರ ಸಿರಿ, ಅಬ್ದುಲ್ ರಹೇಮಾನ ಪಟೇಲ, ಕಾಸಿಂ ಪಟೇಲ ಮುದವಾಳ, ಮಲ್ಲಿಕಾಜರ್ುನ ಹಲಕಟರ್ಿ, ಹಯ್ಯಾಳಪ್ಪ ಗಂಗಾಕರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts