More

    ಮನೆಗಳಿಗೆ ನುಗ್ಗಿದ ನೀರು

    ಗದಗ: ನಗರದಲ್ಲಿ 80 ವರ್ಷದ ಅಜ್ಜಿಗೆ ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಿಷೇಧಿತ ಪ್ರದೇಶವೆಂದು ಗುರುತಿಸಿರುವ ಎಸ್.ಎಂ. ಕೃಷ್ಣಾ ನಗರದಲ್ಲಿ ಮಂಗಳವಾರ ಸುರಿದ ಅಕಾಲಿಕ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನರು ತೊಂದರೆಗೆ ಸಿಲುಕಿದ್ದಾರೆ.

    ಅವಳಿನಗರದಲ್ಲಿ ಒಂದು ಗಂಟೆ ಕಾಲ ಸುರಿದ ಮಳೆಗೆ ಎಸ್.ಎಂ. ಕೃಷ್ಣ ನಗರದಲ್ಲಿ ತಗ್ಗು ಪ್ರದೇಶದಲ್ಲಿರುವ 20ಕ್ಕೂ ಹೆಚ್ಚು ಮನೆಗಳಿಗೆ ನೀರು ಹೊಕ್ಕಿದೆ. ಇದರಿಂದ ಮನೆಯಲ್ಲಿನ ಆಹಾರ ಪದಾರ್ಥಗಳು ನೀರು ಪಾಲಾಗಿವೆ. ಲಾಕ್​ಡೌನ್ ಇರುವುದರಿಂದ ಮೊದಲೇ ಮನೆಗಳಲ್ಲಿ ಆಹಾರ ಪದಾರ್ಥಗಳ ಕೊರತೆ ಇತ್ತು. ಅಳಿದುಳಿದ ಆಹಾರ ಪದಾರ್ಥಗಳೂ ಮಳೆ ನೀರಿನಿಂದ ಹಾಳಾಗಿರುವುದರಿಂದ ಜನರು ಸಂಕಷ್ಟಕೀಡಾಗಿದ್ದಾರೆ. ಮನೆಗೆ ನುಗ್ಗಿ ನೀರು ಹೊರಹಾಕಲು ಜನರು ಹರಸಾಹಸ ಪಡುವಂತಾಗಿತ್ತು. ನೀರು ಮನೆಗೆ ನುಗ್ಗಿದ್ದರಿಂದ ಗರ್ಭಿಣಿಯರು, ಮಹಿಳೆಯರು, ಮಕ್ಕಳು ತೊಂದರೆ ಅನುಭವಿಸುವಂತಾಗಿದೆ. ಕರೊನಾ ವೈರಸ್ ಪಾಸಿಟಿವ್ ಬಂದಿರುವ ವೃದ್ಧೆ ಎಸ್.ಎಂ. ಕೃಷ್ಣ ನಗರಕ್ಕೆ ಮನೆಯೊಂದಕ್ಕೆ ಭೇಟಿ ನೀಡಿದ್ದರಿಂದ ಈ ಪ್ರದೇಶವನ್ನು ಕಂಟೇನ್​ವೆುಂಟ್ ಪ್ರದೇಶ ಎಂದು ಜಿಲ್ಲಾಡಳಿತ ಘೊಷಿಸಿ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಿದೆ.

    ಜಿಲ್ಲೆಯ ವಿವಿಧೆಡೆ ಮಳೆ: ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿದ್ದ ಅವಳಿನಗರ ಸೇರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಗದಗ-ಬೆಟಗೇರಿ, ಮುಂಡರಗಿ, ನರಗುಂದ, ಲಕ್ಷ್ಮೇಶ್ವರ ಸೇರಿ ಜಿಲ್ಲೆಯ ವಿವಿಧ ಕಡೆಗೆ ಮಳೆ ಸುರಿಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts