More

    ಮನೆಯಲ್ಲೇ ‘ಯೋಗ ದಿನ’ ಆಚರಿಸಿ

    ಬೆಳಗಾವಿ: ಪ್ರಸ್ತುತ ಕೋವಿಡ್-19 ಕಾರಣದಿಂದ ಸಾರ್ವಜನಿಕ ಸಭೆ-ಸಮಾರಂಭ ಆಯೋಜಿಸುವುದನ್ನು ನಿಷೇಧಿಸಿರುವುದರಿಂದ ಈ ಸಾಲಿನ ಅಂತಾರಾಷ್ಟ್ರೀಯ ಯೋಗ ದಿನವನ್ನು ಮನೆಯಲ್ಲಿಯೇ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

    ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ಸೂಚನೆಯಂತೆ ಈ ಬಾರಿ ಯೋಗ ದಿನವನ್ನು ‘ಯೋಗದೊಂದಿಗೆ ಮನೆಯಲ್ಲಿರಿ’ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಆರೋಗ್ಯಯುತ ಜೀವನಕ್ಕಾಗಿ ಜೂ. 21ರಂದು ಬೆಳಗ್ಗೆ 7 ಗಂಟೆಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುವುದು.

    ಯೋಗ ಪ್ರಾತ್ಯಕ್ಷಿಕೆಯ ಸಾಮಾಜಿಕ ಜಾಲತಾಣಗಳು ಹಾಗೂ ದೃಶ್ಯ ಮಾಧ್ಯಮ ಅನುಸರಿಸಿಕೊಂಡು ಮನೆಯಿಂದಲೇ ಯೋಗ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts