More

    ಮನೆಯ ಸುತ್ತಲೂ ಸ್ವಚ್ಚತೆ ಕಾಪಾಡಿ

    ಯಾದಗಿರಿ: ಋತುಮಾನಕ್ಕೆ ತಕ್ಕಂತೆ ಸಾಂಕ್ರಾಮಿಕ ರೋಗಗಳು ನಮ್ಮನ್ನು ಬಾಸದಂತೆ ತಡೆಗಟ್ಟಲು ಮನೆ ಸುತ್ತಮುತ್ತ ಸ್ವಚ್ಚತೆ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾ ಆರೋಗ್ಯಾಕಾರಿ ಡಾ.ಗುರುರಾಜ ಹಿರೇಗೌಡರ ತಿಳಿಸಿದರು.

    ರಾಷ್ಟ್ರೀಯ ಡೆಂಘೆ ದಿನದ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಆರೋಗ್ಯಾಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಅರಿವು ಮೂಡಿಸುವ ಜಾಥಾದಲ್ಲಿ ಮಾತನಾಡಿ, ಎಲ್ಲರ ಸಹಭಾಗಿತ್ವದೊಂದಿಗೆ ಡೆಂಘೆಯನ್ನು ಸೋಲಿಸೋಣ ಎಂಬುದು ಈ ವರ್ಷದ ಧ್ಯೇಯವಾಕ್ಯವಾಗಿದೆ. ಈಡೀಸ್ ಈಜಿಪ್ಟೈ ಸೊಳ್ಳೆ ಕಡಿತದಿಂದ ಹರಡುವ ಡೆಂಘೆ ಜ್ವರ ವೈರಾಣುಗಳಿಂದ ಉಂಟಾಗುತ್ತದೆ. ತೀವ್ರ ಜ್ವರ, ಮೈ,ಕೈ ನೋವು ಮತ್ತು ಕೀಲು ನೋವು, ತೀವ್ರತರವಾದ ತಲೆನೋವು, ಹೆಚ್ಚಾಗಿ ಹಣೆ ಮುಂಭಾಗ, ಕಣ್ಣಿನ ಹಿಂಭಾಗದ ನೋವು, ವಾಕರಿಕೆ ಮತ್ತು ವಾಂತಿ, ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ ಎಂದರು.

    ರೋಗಿಗೆ ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಆಗಿರುತ್ತದೆ. ಮನೆ ಸುತ್ತಮುತ್ತ ನೀರು ಸಂಗ್ರಹಗೊಳ್ಳದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ನೀರಿನ ತೊಟ್ಟಿಗಳು, ಡ್ರಮ್, ಬ್ಯಾರಲ್ ಮತ್ತು ಟ್ಯಾಂಕ್ಗಳನ್ನು ಕನಿಷ್ಠ ವಾರಕ್ಕೆ ಒಂದು ಬಾರಿ ಸ್ವಚ್ಛಗೊಳಿಸಿ ಭದ್ರವಾಗಿ ಮುಚ್ಚಿಡಬೇಕು, ಹಗಲಲ್ಲಿ ನಿದ್ದೆ ಮಾಡುವ, ವಿಶ್ರಾಂತಿ ಪಡೆಯುವವರು ಸೊಳ್ಳೆ ಪರದೆ ಹಾಗೂ ಸೊಳ್ಳೆ ನಿರೋಧಕಗಳನ್ನು ತಪ್ಪದೆ ಬಳಸಲು ಸಲಹೆ ನೀಡಿದರು.

    ಆರ್ಸಿಎಚ್ಒ ಡಾ.ಲಕ್ಷ್ಮೀಕಾಂತ್ ಒಂಟಿಪೀರ, ಜಿಲ್ಲಾ ಆರೋಗ್ಯ ಶಿಕ್ಷಣಾಕಾರಿ ತುಳಸಿರಾಮ, ಬಸವರಾಜ ಕಾಂತಾ ಇದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts