More

    ಮನೆ ನಿರ್ಮಾಣಕ್ಕೆ 115 ಕೋಟಿ ರೂ.

    ಬೆಳಗಾವಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬೆಳಗಾವಿ ದಕ್ಷಿಣ ಕ್ಷೇತ್ರದ 37 ಕೊಳೆಗೇರಿ ಪ್ರದೇಶಗಳ ನಿವಾಸಿಗಳಿಗೆ 1,748 ಮನೆ ನಿರ್ಮಿಸುವುದಕ್ಕೆ 115 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದೆ ಮಂಗಲ ಅಂಗಡಿ ತಿಳಿಸಿದರು.

    ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ವಡಗಾವಿ ಲಕ್ಷ್ಮೀ ನಗರದಲ್ಲಿ ಭಾನುವಾರ ಕೊಳೆಗೇರಿ ನಿವಾಸಿಗಳಿಗೆ ಮನೆಗಳ ನಿರ್ಮಾಣಕ್ಕೆ ಭಾನುವಾರ ಹಮ್ಮಿಕೊಂಡಿದ್ದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಸಾಮಾನ್ಯ ನಾಗರಿಕನಿಗೂ ಉತ್ತಮ ಸೂರು ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

    ಕೇಂದ್ರ ಸರ್ಕಾರ ಬಡವರ ಪಾಲಿಗೆ ಅನೇಕ ಜನಪರ ಹಾಗೂ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಈ ವಸತಿ ಯೋಜನೆ ಸದುಪಯೋಗವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದರು.

    ಮನೆಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಶಾಸಕ ಅಭಯ ಪಾಟೀಲ ಮಾತನಾಡಿ, ರಾಜ್ಯ ಸರ್ಕಾರ ನೇಕಾರರ ಕಣ್ಮಣಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಮುದಾಯಕ್ಕೆ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಕ್ಷೇತ್ರಕ್ಕೆ ಸುಮಾರು 3 ಸಾವಿರ ಮನೆಗಳು ಮಂಜೂರು ಆಗಿವೆ. ಮನೆ ನಿರ್ಮಾಣಕ್ಕೆ 2.70 ಲಕ್ಷ ರೂ. ಅನುದಾನ ನೀಡುತ್ತಿದೆ. ಮನೆಗಳ ಕಾಮಗಾರಿಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದರು. ಸರ್ಕಾರ ನೇಕಾರರ ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುತ್ತಿವೆ. 8 ಸಾವಿರಕ್ಕಿಂತ ಹೆಚ್ಚು ರೈತರಿಗೆ ರೈತ ಸಮ್ಮಾನ್ ಸೌಲಭ್ಯ ಒದಗಿಸುವಂತಹ ಅನೇಕ ಮಹತ್ವದ ಜನಪರ ಯೋಜನೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಾಡುತ್ತಿವೆ ಎಂದರು. ಪಾಲಿಕೆ ಸದಸ್ಯರಾದ ಪ್ರೀತಿ ಕಾಮಕರ, ದೀಪಾಲಿ ಟೊಪಗಿ, ರೇಷ್ಮಾ ಕಾಮಕರ, ಉದಯ ಉಪರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts