More

    ಮನ ಸೆಳೆದ ಡಿಜಿಟಲ್ ಪೈಂಟಿಂಗ್ ಮಹೋತ್ಸವ

    ಚಿಕ್ಕಮಗಳೂರು: ಸ್ವಾತಂತ್ರ್ಯ ಸುವರ್ಣಮಹೋತ್ಸವ ಪ್ರಯುಕ್ತ ಜಿಲ್ಲಾಡಳಿತ ಜಿಲ್ಲಾ ಆಟದ ಮೈದಾನದಲ್ಲಿ ಶನಿವಾರ ಅಮೃತ ಗಾಯನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಗಾಯಕಿ ರೇಖಾ ಪ್ರೇಮಕುಮಾರ್ ನೇತೃತ್ವದಲ್ಲಿ ದೇಶಭಕ್ತಿ ಗೀತೆಗಳನ್ನು ಹಾಡಲಾಯಿತು. ಸಾವಿರಾರು ವಿದ್ಯಾರ್ಥಿಗಳು ರಾಷ್ಟ್ರ ಧ್ವಜ ಪ್ರದರ್ಶಿಸಿದರು. ಮೈದಾನ ಪೂರ್ತಿ ದೇಶಭಕ್ತಿ ಗೀತೆಗಳ ಗಾಯನ ಹಾಗೂ ಸಾವಿರಾರು ರಾಷ್ಟ್ರ ಧ್ವಜಗಳ ಹಾರಾಟದೊಂದಿಗೆ ಗಮನ ಸೆಳೆಯಿತು. ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಪಂ ಸಿಇಒ ಜಿ.ಪ್ರಭು, ಎಡಿಸಿ ರೂಪಾ, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕ್ಷೇತ್ರಗಳ ಮುಖಂಡರು, ಸಾಹಿತಿಗಳು ಉಪಸ್ಥಿತರಿದ್ದರು. ಅಧಿಕಾರಿಗಳು, ಸರ್ಕಾರಿ ನೌಕರರು ಬಿಳಿ ವಸ್ತ್ರ ಧರಿಸಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

    ರಾಜ್ಯದಲ್ಲೇ ಪ್ರಥಮ ಬಾರಿಗೆ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಅಭಯ್ ಸಂಸ್ಥೆ ಸಹಕಾರದೊಂದಿಗೆ ಶಾಂತಿನಿಕೇತನ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಶಾಂತಿನಿಕೇತನ ಆರ್ಟ್ ಫೌಂಡೇಶನ್ ಆಯೋಜಿಸಿರುವ ಡಿಜಿಟಲ್ ಪೈಂಟಿಂಗ್ ಚಿತ್ರ ರಚನಾ ಮಹೋತ್ಸವಕ್ಕೆ ಶನಿವಾರ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts