More

    ಮಲೆನಾಡು ಭಾಗದಲ್ಲಿ ಹೆಚ್ಚಿದ ವರ್ಷಧಾರೆ

    ಮುಂಡರಗಿ: ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ, ತಾಲೂಕಿನ ಹಮ್ಮಿಗಿ ಸಮೀಪದ ಸಿಂಗಟಾಲೂರ ಬ್ಯಾರೇಜ್​ನ 26 ಗೇಟ್​ಗಳ ಪೈಕಿ 10 ಗೇಟ್​ಗಳ ಮೂಲಕ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.
    ಸಿಂಗಟಾಲೂರ ಬ್ಯಾರೇಜ್​ನಿಂದ ಶುಕ್ರವಾರ 38,351 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ ಎಂದು ಎಇಇ ಪ್ರಕಾಶ ಐ. ತಿಳಿಸಿದ್ದಾರೆ.
    ಬ್ಯಾರೇಜ್ 3.12 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಹಿನ್ನೀರಿನಿಂದ ಗುಮ್ಮಗೋಳ, ಬಿದರಳ್ಳಿ, ವಿಠಲಾಪೂರ ಮತ್ತು ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಅಲ್ಲಿಪೂರ ಗ್ರಾಮಗಳು ಮುಳುಗಡೆ ಪ್ರದೇಶಕ್ಕೆ ಒಳಪಟ್ಟಿವೆ. ನಾಲ್ಕು ಗ್ರಾಮಗಳನ್ನು ಇದುವರೆಗೂ ಸ್ಥಳಾಂತರಿಸದ ಕಾರಣ ಬ್ಯಾರೇಜ್​ನಲ್ಲಿ 1.81 ಟಿಎಂಸಿ ನೀರು ಮಾತ್ರ ಸಂಗ್ರಹಿಸಲಾಗುತ್ತಿದೆ. ಹೀಗಾಗಿ, ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಜೂ. 20ರಂದು ಸಹ ಬ್ಯಾರೇಜ್​ಗೆ 38,670ಕ್ಯೂಸೆಕ್ ನೀರು ಹರಿದು ಬಂದಿದ್ದರಿಂದ ನೀರನ್ನು ನದಿಗೆ ಬಿಡಲಾಗಿತ್ತು.
    ಸಿಂಗಟಾಲೂರ ಬ್ಯಾರೇಜ್​ಗೆ ಸುಮಾರು 1.50 ಲಕ್ಷ ಕ್ಯೂಸೆಕ್​ಗೂ ಅಧಿಕ ನೀರು ಹರಿದು ಬಂದರೆ ಮಾತ್ರ ಹಿನ್ನೀರಿನ ಮುಳುಗಡೆ ಪ್ರದೇಶಕ್ಕೆ ಒಳಪಡುವ ನಾಲ್ಕು ಗ್ರಾಮಗಳಿಗೆ ಪ್ರವಾಹ ಸಮಸ್ಯೆ ಎದುರಾಗುತ್ತದೆ. ಎರಡು ವರ್ಷಗಳ ಹಿಂದೆ 1.50 ಲಕ್ಷ ಕ್ಯೂಸೆಕ್​ನಿಂದ 2.50 ಲಕ್ಷ ಕ್ಯೂಸೆಕ್ ನೀರು ಹರಿದು ಬಂದಿದ್ದರಿಂದ ಕೆಲ ಗ್ರಾಮಗಳು ಪ್ರವಾಹ ಸಮಸ್ಯೆಯನ್ನು ಎದುರಿಸುವಂತಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts