More

    ಮಲೇರಿಯಾ ನಿಯಂತ್ರಣ ಜಾಗೃತಿ ಅಗತ್ಯ

    ಅರಕಲಗೂಡು: ಮಲೇರಿಯಾಮುಕ್ತ ಕರ್ನಾಟಕಕ್ಕೆ ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ನಾಗಪ್ಪ ತಿಳಿಸಿದರು.

    ಪಟ್ಟಣದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ಬುಧವಾರ ಏರ್ಪಡಿಸಿದ್ದ ಒಂದು ದಿನದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಮಲೇರಿಯಾ ರೋಗದ ಮೂಲ ಸೊಳ್ಳೆ. ಸೊಳ್ಳೆ ಅತ್ಯಂತ ಅಪಾಯಕಾರಿ ಜೀವಿಯಾಗಿದ್ದು, ಹಲವರ ಜೀವಕ್ಕೆ ಎರವಾಗುತ್ತಿದೆ. ಈ ರೋಗದ ನಿಯಂತ್ರಣ ಕುರಿತು ಅರಿವು ಮೂಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದೆ. ಮಕ್ಕಳನ್ನು ಜಾಗೃತಿಗೊಳಿಸುವ ಉದ್ದೇಶದಿಂದ ಶಿಕ್ಷಕರಿಗೆ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.

    ಸೊಳ್ಳೆ ಕೇವಲ ಮಲೇರಿಯಾವಲ್ಲದೆ ಚಿಕೂನ್ ಗುನ್ಯಾ, ಡೆಂಘೆ, ಆನೆಕಾಲು ರೋಗ ಸೇರಿದಂತೆ ಆರು ಬಗೆಯ ರೋಗ ವಾಹಕವಾಗಿದೆ. ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳಿಲ್ಲ. ಆದರೂ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದವರಿಂದ ಇದು ಹರಡುವ ಸಾಧ್ಯತೆ ಇದ್ದು, ಈ ಕುರಿತು ಎಚ್ಚರ ಅಗತ್ಯ ಎಂದರು.

    ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಅರುಂಧತಿ, ಡಯಟ್ ನೋಡಲ್ ಅಧಿಕಾರಿ ಗಿರೀಶ್ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ ಪುಷ್ಪಲತಾ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿಷ್ಣು ಪ್ರಕಾಶ್, ಚಂದ್ರೇಗೌಡ, ಆರೋಗ್ಯ ಶಿಕ್ಷಣಾಧಿಕಾರಿ ಕೆ.ಟಿ.ಪರಮೇಶ್ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ 50 ಜನ ಶಿಕ್ಷಕರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts