More

    ಮಳೆಗಾಗಿ ದೇವರ ಮೊರೆ ಹೋದ ಕೃಷಿಕರು

    ಶನಿವಾರಸಂತೆ: ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕೃಷಿಕರು ತತ್ತರಿಸಿದ್ದು, ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ.
    ದಿನೇ ದಿನೆ ತಾಪಮಾನ ಏರಿಕೆಯಾಗುತ್ತಿದ್ದು, ಜಿಲ್ಲೆಯ ಬಹುತೇಕ ಕಡೆ ಇದುವರೆಗೂ ಒಂದು ಹನಿಯೂ ಮಳೆಯಾಗಿಲ್ಲ. ಜನರು ಬೇಸಿಲಿನ ಬೇಗೆಗೆ ತತ್ತರಿಸಿ ಹೋಗಿದ್ದಾರೆ. ಕೃಷಿಕರ ಪಾಡು ಹೇಳತೀರದಾಗಿದೆ. ಹೀಗಾಗಿ ದೇಗುಲಗಳಲ್ಲಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
    ಉತ್ತರ ಕೊಡಗಿನ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಜನರು ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಾರೆ. ನೀರುಗುಂದ ಮತ್ತು ಕೊಡ್ಲಿಪೇಟೆ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮದ ರೈತರು ಕಾಫಿ, ತೆಂಗು, ಅಡಕೆ, ಕಾಳುಮೆಣಸು ಮುಂತಾದ ಬೆಳೆಗಳನ್ನು ಬೆಳೆಯುತ್ತಾರೆ. ಇದುವರೆಗೂ ಮಳೆಯಾಗದ ಹಿನ್ನೆಲೆಯಲ್ಲಿ ಕೃಷಿ ಬೆಳೆಗಳು ಸುಟ್ಟು ಹೋಗಿದ್ದು, ರೈತರು ಕಂಗೆಟ್ಟಿದ್ದಾರೆ.
    ಹೀಗಾಗಿ, ಕೊಡ್ಲಿಪೇಟೆ ಸಮೀಪದ ನೀರುಗುಂದ ಗ್ರಾಮಸ್ಥರು ಶ್ರೀ ಕ್ಷೇತ್ರ ಕಲ್ಲಹಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ನೇತೃತ್ವದಲ್ಲಿ ಮಳೆ ಆಗಮನಕ್ಕಾಗಿ ಗ್ರಾಮದ ಶ್ರೀ ಮಳೆ ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
    ಕಳೆದ ಬಾರಿ ಇದೇ ಅವಧಿಯಲ್ಲಿ ಕೊಡ್ಲಿಪೇಟೆ ಹೋಬಳಿಯಲ್ಲಿ 7 ಇಂಚು ಮಳೆಯಾಗಿತ್ತು. ಈ ವರ್ಷ ಒಂದು ಹನಿಯೂ ಬಿದ್ದಿಲ್ಲ. ಮಳೆಗಾಗಿ ಗ್ರಾಮದ ಮಳೆ ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದು ರೈತರು ಹೇಳಿದರು.
    ಗ್ರಾಮದ ಅವಿವಾಹಿತ ಮತ್ತು ಶಿವದೀಕ್ಷೆ ಪಡೆದಿರುವ ಯುವಕನೊಬ್ಬ ಬೆಳಗಿನಿಂದಲೇ ಉಪವಾಸ ವ್ರತದಲ್ಲಿದ್ದು, ಸ್ವಾಮೀಜಿ ಅವರ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡಿದ್ದರು. ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts