More

    ಮಳೆಗಾಲದಲ್ಲಿ ಜಿಲ್ಲೆಗೆ ಉಸ್ತುವರಿ

    ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಪ್ರವಾಹ ಭೀತಿ ಹೆಚ್ಚುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಆಯಾ ಕ್ಷೇತ್ರದ ಜನಪ್ರತಿನಿಧಿಗಳು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮುಂದಾಗದಿರುವುದು ಜನರ ಆಕ್ರೋಶಕ್ಕೆ ಕಾರವಾಗಿದೆ.

    ಬೆಳಗಾವಿ, ಚಿಕ್ಕೋಡಿ, ನಿಪ್ಪಾಣಿ, ಖಾನಾಪುರ ಹಾಗೂ ಕಿತ್ತೂರು ತಾಲೂಕಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದರಿಂದ ನದಿಗಳ ಒಳಹರಿವು ಹೆಚ್ಚಾಗಿದ್ದು, ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಹಾಗೂ ಶಾಲಾ ಕಟ್ಟಡಗಳು ಕುಸಿದಿದ್ದು, ಜನರನ್ನು ನಿದ್ದೆಗೆಡಿಸಿದೆ.
    ಕಳೆದ 24 ಗಂಟೆಯಲ್ಲಿ ಖಾನಾಪುರ ತಾಲೂಕಿನಲ್ಲಿ 4 ಸರ್ಕಾರಿ ಶಾಲಾ ಕಟ್ಟಡ, ಕಿತ್ತೂರು ತಾಲೂಕಿನಲ್ಲಿ 2 ಮನೆ ಹಾಗೂ ಒಂದು ಶಾಲೆ ಕುಸಿತದಿರುವುದು ಸೇರಿದಂತೆ 20ಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಯಾಗಿವೆ. ಅಥಣಿ ಭಾಗದಲ್ಲಿ ಭೂಕಂಪನ ಸಂಭವಿಸಿದ್ದರಿಂದ ಮನೆಗಳು ಬಿರುಕು ಬಿಟ್ಟಿವೆ. ಒಂದು ಕಡೆ ಮುಖ್ಯಮಂತ್ರಿಗಳು ಸಹ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಚಿವರು ಹಾಗೂ ಶಾಸಕರಿಗೆ ಸೂಚನೆ ನೀಡಿದ್ದಾರೆ. ಆದರೆ, ಇದುವರೆಗೂ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೂರ್ವಭಾವಿ ಸಭೆ ಅಥವಾ ಕ್ಷೇತ್ರ ಸಂಚಾರವಾಗಲಿ ಮಾಡಿಲ್ಲ ಎಂದು ಜನತೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿ ನೀರಿನ ಪ್ರಮಾಣ ದಿನೇ ದಿನೆ ಹೆಚ್ಚಾಗುತ್ತಿದ್ದು, ನದಿ ತೀರದ ಜನರಲ್ಲಿ ಆತಂಕ ಹೆಚ್ಚಾಗಿದೆ. ಅದರೂ, ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ಭರವಸೆಯ ಜತೆಗೆ ಆತ್ಮಸ್ಥೈರ್ಯ ತುಂಬುವ ಬದಲು ಆಕ್ರೋಶ ಉಂಟಾಗುವಂತೆ ಮಾಡುತ್ತಿದ್ದಾರೆ.

    ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದ್ದರೂ ಜನಪ್ರತಿನಿಧಿಗಳ ನಿರ್ಲಕ್ಷೃ ಧೋರಣೆ ವಿರುದ್ಧ ಸಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ವಿಡಿಯೋ ಹೇಳಿಕೆ ಮೂಲಕ ಪ್ರಕಟಣೆ ನೀಡಿದ್ದು, ಸಭೆ ಮಾಡಿ, ಮುಂಜಾಗ್ರತೆ ಜರುಗಿಸಿರುವ ಕುರಿತು ಮಾತನಾಡಿ, ಸಮಜಾಯಿಸಿ ನೀಡಿದ್ದಾರೆ.

    2022ರಲ್ಲಿ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದಾಗಿ ಸಂಭವಿಸಬಹುದಾದ ಹಾನಿ ಕುರಿತು ಮುಂಜಾಗ್ರತವಾಗಿ ಮೇ 5 ಮತ್ತು ಜೂ.22ರಂದು ಸಭೆ ಮಾಡಿ, ಜಿಲ್ಲಾಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಪ್ರವಾಹದ ಸಮಸ್ಯೆಗಳನ್ನು ಎದುರಿಸುವ ನಿಟ್ಟಿನಲ್ಲಿ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. 386 ಪುನರ್ವಸತಿ ಕೇಂದ್ರ ಹಾಗೂ 262 ಜಾನುವಾರು ಶಿಬಿರಗಳಿಗೂ ಸ್ಥಳ ಗುರುತಿಸಲಾಗಿದೆ. ದಿನದ 24 ಗಂಟೆಯೂ ಅಲರ್ಟ್ ಇರುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಇಷ್ಟೆಲ್ಲ ಪ್ರವಾಹ ಭೀತಿ ಎದುರಾದರೂ ಜನಪ್ರತಿನಿಧಿಗಳು ಹಾಗೂ ಉಸ್ತುವಾರಿ ಸಚಿವರು ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದಾರೆ. ಕ್ಷೇತ್ರದ ಜನತೆ ಸಂಕಷ್ಟ ಎದುರಿಸುತ್ತಿದ್ದಾರೆ. ಈಗಾಗಲೇ ಉಸ್ತುವಾರಿ ಸಚಿವರು ಸಭೆ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ಎಲ್ಲಿ?, ಹೇಗೆ? ಎಂಬುದು ಯಾರಿಗೂ ಗೊತ್ತಿಲ್ಲ. ಕೂಡಲೇ ರಾಜಧಾನಿ ಬಿಟ್ಟು ಜಿಲ್ಲೆಗೆ ಆಗಮಿಸಿ, ಕಾರ್ಯೋನ್ಮುಖರಾಗಬೇಕು.
    | ಮಂಜು ಕಾಂಬಳೆ ಕಾಂಗ್ರೆಸ್ ಮುಖಂಡ, ಬೆಳಗಾವಿ

    ಪ್ರವಾಹ ಸನ್ನಿವೇಶ ಎದುರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜನರ ಸಂರಕ್ಷಣೆಗಾಗಿ 39 ಬೋಟ್, ಎನ್‌ಡಿಆರ್‌ಎಫ್‌ನ 22 ತಂಡ ಸನ್ನದ್ಧಗೊಂಡಿವೆ. ಪ್ರವಾಹ ಸಂಭವಿಸುವ ಪ್ರಮಾಣದಲ್ಲಿ
    ಮಹಾರಾಷ್ಟ್ರ ಭಾಗದಿಂದ ನೀರು ಬಂದಿ ಲ್ಲ. ಆದರೂ, ಸ್ಥಳೀಯವಾಗಿ ಸುರಿದ ಮಳೆಯಿಂದಾಗಿ ಆಗುತ್ತಿರುವ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
    | ಗೋವಿಂದ ಕಾರಜೋಳ ಜಿಲ್ಲಾ ಉಸ್ತುವಾರಿ ಸಚಿವ

    | ರವಿ ಗೋಸಾವಿ ಬೆಳಗಾವಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts