More

    ಮಳೆಯಬ್ಬರಕ್ಕೆ ತತ್ತರಿಸಿದ ಜನ

    ಬೆಳಗಾವಿ: ನಗರದಲ್ಲಿ ಗುಡುಗು, ಮಿಂಚು ಸಹಿತ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ನಾಗರಿಕರು ತತ್ತರಿಸಿದ್ದಾರೆ. ಮತ್ತೊಂದೆಡೆ ಗಾಳಿ ರಭಸಕ್ಕೆ ರಸ್ತೆಗಳ ಮೇಲೆ ಮರಗಳು ಬಿದ್ದಿದ್ದರಿಂದ ಜನರು ಸಮಸ್ಯೆ ಎದುರಿಸಬೇಕಾಯಿತು. ಪಾಲಿಕೆಯು ಚರಂಡಿಗಳನ್ನು ಸ್ವಚ್ಛ ಮಾಡದ ಕಾರಣ ಮಳೆ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಶುಕ್ರವಾರ ತಡರಾತ್ರಿ ಮತ್ತು ಶನಿವಾರ ಸಂಜೆ ಸುರಿದ ಮಳೆಯಿಂದಾಗಿ ಚರಂಡಿಗಳು ಬ್ಲಾಕ್ ಆಗಿ ನಗರದ ವಿವಿಧ ಪ್ರದೇಶಗಳಲ್ಲಿ ಸಮಸ್ಯೆ ಉಂಟಾಗಿತ್ತು. ಮಹಾಂತೇಶ ನಗರ, ವೀರಭದ್ರ ನಗರ, ಶಾಹುನಗರ, ಕ್ಯಾಂಪ್ ಪ್ರದೇಶ, ಅನಗೋಳ, ವಿಜಯ ನಗರ, ಗಾಂಧಿ ವೃತ್ತ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆಯಿಂದಾಗಿ ದೊಡ್ಡ ಮರಗಳು ಬೇರು ಸಮೇತ ನೆಲಕಚ್ಚಿದ್ದವು. ಗಾಳಿಯ ರಭಸಕ್ಕೆ ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಿದ್ದವು. ಕೋಟೆ ಕೆರೆ ರಸ್ತೆ, ಸಮರ್ಥ ನಗರ, ಶಹಾಪುರ, ವಡಗಾಂವ, ನೆಹರು ನಗರ, ಗಾಂಧಿ ನಗರ, ಕುಮಾರಸ್ವಾಮಿ ಬಡಾವಣೆ, ಮಹಾಂತೇಶ ನಗರ, ಹಳೇ ಪಿಬಿ ರಸ್ತೆ ಸೇರಿದಂತೆ ವಿವಿಧ ಭಾಗಗಳಲ್ಲಿ ರಸ್ತೆ ಮೇಲೆ ಮಳೆ ನೀರು ಮಡುಗಟ್ಟಿ ನಿಂತಿದ್ದರಿಂದ ಸಮಸ್ಯೆ ಉಂಟಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts