More

    ಮಳೆಹಾನಿ ಪರಿಹಾರಕ್ಕೆ ಬೇಡ ದಾಖಲಾತಿ ನೆಪ, ಸಚಿವ ಬಿ.ಎ.ಬಸವರಾಜ ಸೂಚನೆ

    ದಾವಣಗೆರೆ : ಮಳೆಯಿಂದಾದ ಹಾನಿ ಸಂಬಂಧ ಸಂತ್ರಸ್ತರಿಗೆ ಮಾರ್ಗಸೂಚಿಯನ್ವಯ ಪರಿಹಾರ ನೀಡಬೇಕು. ದಾಖಲಾತಿ ನಪದಲ್ಲಿ ನಿರ್ಲಕ್ಷಿಸಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಮಳೆಹಾನಿ ಪರಿಹಾರ ಮತ್ತು ಕೋವಿಡ್ ಸ್ಥಿತಿಗತಿಗಳ ಪರಿಶೀಲನೆ ಕುರಿತು ಶನಿವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
    ಮಳೆಯಿಂದ ಹಲವಡೆ ಹಾನಿಗೊಳಗಾದ ಮನೆಗಳನ್ನು ಸ್ಥಳೀಯ ಪಿಡಿಒ ಮತ್ತು ತಹಸೀಲ್ದಾರರು ಖುದ್ದು ಭೇಟಿ ನೀಡಿ ಪರಿಶೀಲಿಸುವ ಜತೆಗೆ ಪರಿಹಾರ ಮಂಜೂರು ಮಾಡಬೇಕೆಂದು ಸೂಚನೆ ನೀಡಿದರು.
    ಇನ್ನು ಎರಡು ತಿಂಗಳಿಗೂ ಹೆಚ್ಚು ಕಾಲ ಮಳೆಗಾಲವಿದ್ದು ಕಟಾವಿಗೆ ಬಂದಿರುವ ಬೆಳೆಗಳನ್ನು ಉಳಿಸಿಕೊಳ್ಳಲು ರೈತರಿಗೆ ಮಾರ್ಗದರ್ಶನ ನೀಡಬೇಕು. 956 ಎಕರೆ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು ಅರ್ಹ ರೈತರಿಗೆ ಅನ್ಯಾಯವಾಗದಂತೆ ಸೂಕ್ತ ಪರಿಹಾರ ಒದಗಿಸಲು ಕೃಷಿ ಇಲಾಖೆ ಕ್ರಮ ಕೈಗೊಳ್ಳದಹು. ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಹಾನಿಗೊಳಗಾದ ಬೆಳೆಗಳ ಸರ್ವೇ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು.
    ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚರಂಡಿ, ರಾಜಕಾಲುವಗಳ ಒತ್ತುವರಿ ತೆರವುಗೊಳಿಸಬೇಕು, ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಂಡ ಬಸ್‌ ನಿಲ್ದಾಣ, ರಸ್ತೆ ಇತರ ಕಾಮಗಾರಿಗಳನ್ನು ಮುಂಬರುವ ಏಪ್ರಿಲ್ ತಿಂಗಳಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
    ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮಾತನಾಡಿ, ಕಳೆದ ಹತ್ತು ದಿನಗಳಿಂದ ಜಿಲ್ಲೆಯಲ್ಲಿ ಇನ್ನೂರು ಪಟ್ಟು ಹೆಚ್ಚಿನ ಮಳೆಯಾಗಿದೆ. 140 ಮಿ.ಮೀ ಹೆಚ್ಚು ಮಳೆಯಾಗಿದೆ ಎಂದರು. ಸಭೆಯಲ್ಲಿ ಎಸ್ಪಿ ಸಿ.ಬಿ ಬ್ಯಾಂಕ್, ಜಿ.ಪ., ಸಿ.ಒ ಡಾ.ಎ.ಚನ್ನಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜೆ, ಸ್ಮಾರ್ಟ್ ಸಿಟಿ ಎಂ.ಡಿ ರವೀಂದ್ರ ಮಲ್ಲಾಪುರ, ಉಪವಿಭ ಆಗಾಧಿಕಾರಿಗಳಾದ ದುರ್ಗಾಶ್ರೀ, ಹುಲ್ಲುಮನಿ ತಿಮ್ಮಣ್ಣ ಇವರ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts