More

    ಮಳೆ, ಗಾಳಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರಕ್ಕೆ ಕ್ರಮ

    ಬಾಗಲಕೋಟೆ: ಜಿಲ್ಲೆಯಲ್ಲಿ ಗುರುವಾರ ಸುರಿದ ಬಾರಿ ಮಳೆ ಹಾಗೂ ಗಾಳಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಜಾನಕಿ ಕೆ.ಎಂ ತಿಳಿಸಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು ಹಾನಿಯಾದ ಪ್ರದೇಶಗಳಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಭೇಟಿ ನೀಡಿ ಹಾನಿ ಸಂಪೂರ್ಣ ವರದಿಯಲ್ಲಿ ನೀಡಲು ಸೂಚಿಸಿದ್ದು, ವರದಿ ಆದಾರದ ಮೇಲೆ ಸೂಕ್ತ ಪರಿಹಾರ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಬಕವಿ ಬನಹಟ್ಟಿ ತಾಲೂಕಿನ ಢವಳೇಶ್ವರ ಗ್ರಾಮದ 17 ವರ್ಷದ ಕವಿತಾ ಬಸಪ್ಪ ಹರಳಿ ಸಿಡಿಲು ಬಡಿದು ಮಹಾಲಿಂಗಪೂರದ ಕನಕರೆಡ್ಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಚಿಕಿತ್ಸೆ ಕೊಡಿಸಲು ರಬಕವಿ-ಬನಹಟ್ಟಿ ತಹಶೀಲ್ದಾರ ಗಿರೀಶ ಸ್ವಾದಿ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

    ಬಾಗಲಕೋಟೆ ತಾಲೂಕಿನ ಹಿರೇಶೆಲ್ಲಿಕೇರಿ ಗ್ರಾಮದಲ್ಲಿ 2 ಎಮ್ಮೆಗಳು ಸಿಡಿಲಿಗೆ ಮೃತಪಟ್ಟಿದ್ದು, ತಲಾ 37500 ರೂ.ಗಳಂತೆ ಪರಿಹಾರ ಕೂಡಲೇ ಪಾವತಿಗೆ ತಹಶೀಲ್ದಾರ ಅಮರೇಶ ಪಮ್ಮಾರಗೆ ಸೂಚಿಸಲಾಗಿದೆ. ಬಾಗಲಕೋಟೆ ತಾಲೂಕಿನ 3, ರಬಕವಿ-ಬನಹಟ್ಟಿಯಲ್ಲಿ 6, ಬಾದಾಮಿ 1, ಜಮಖಂಡಿ 2 ಸೇರಿ ಒಟ್ಟು 12 ಮನೆಗಳು ಭಾಗಶಃ ಹಾನಿಯಾಗಿವೆ. ಅಲ್ಲದೇ ಬಾಗಲಕೋಟೆ ತಾಲೂಕಿನಲ್ಲಿ 16 ಪತ್ರಸ್ ಶೆಡ್‍ಗಳು ಸಹ ಹಾನಿಯಾಗಿರುವ ಬಗ್ಗೆ ಬಂದಿದ್ದು, ಕಂದಾಯ, ಪಂಚಾಯತ ರಾಜ್ ಇಂಜಿನೀಯರಗಳ ಕುರಿತು ಜಂಟಿ ಸಮೀಕ್ಷೆ ಕೈಗೊಂಡು ನಿಯಮಾನುಸಾರ ಪರಿಹಾರಕ್ಕೆ ತಹಶೀಲ್ದಾರರಿಗೆ ಸೂಚಿಸಲಾಗಿದೆ.

    ತಾಲೂಕಿನ ಕಲಾದಗಿ ಗ್ರಾಮದಲ್ಲಿ 2.24 ಎಕರೆ ಪ್ರದೇಶದಲ್ಲಿ ಬೆಳೆದ ದಾಳಿಂಬೆ ಬೆಳೆ ಹಾನಿಯಾಗಿದ್ದು, ಕೃಷಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಲು ಸೂಚಿಸಲಾಗಿದೆ. ಹಾನಿಯಾದ ಬೆಳೆಗೆ ಸೂಕ್ತ ಪರಿಹಾರಕ್ಕೆ ಕ್ರಮವಹಿಸಲಾಗುವುದೆಂದು ತಿಳಿಸಿದ್ದಾರೆ. ಅಲ್ಲದೇ ಬಾಗಲಕೋಟೆ ತಾಲೂಕಿನ ತುಳಸಿಗೇರಿ, ದೇವನಾಳ, ಕೆರಕಲಮಟ್ಟಿ ಸೇರಿದಂತೆ ಇತರೆ ಭಾಗದಲ್ಲಿ ಹಾನಿ ಸಂಭವಿಸಿದ್ದು, ಅಧಿಕಾರಿಗಳು ಭೇಟಿ ನೀಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts