More

    ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಿಷಿದ್ಧ



    ಧಾರವಾಡ: ಕರೊನಾ ಸಂದರ್ಭದಲ್ಲೇ ಬಕ್ರೀದ್ ಹಬ್ಬ ಬಂದಿದ್ದು, ಮುಂಜಾಗ್ರತೆ ಕ್ರಮವಾಗಿ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅವರು ಮುಸ್ಲಿಂ ಸಮಾಜದ ಮುಖಂಡರೊಂದಿಗೆ ಶಾಂತಿಸಭೆ ನಡೆಸಿದರು.

    ನಗರದ ಪೊಲೀಸ್ ಹೆಡ್ ಕ್ವಾರ್ಟರ್ಸ್​ನ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಕೆಲ ಕಟ್ಟುನಿಟ್ಟಿನ ಆದೇಶಗಳನ್ನು ನೀಡಿದರು.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಕ್ರೀದ್ ಹಬ್ಬದಂದು ಮುಸ್ಲಿಂ ಸಮುದಾಯದವರು ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ. ಬದಲಿಗೆ ಮಸೀದಿ ಒಳಗೆ ಕೇವಲ 50 ಜನ ಪರಸ್ಪರ ಅಂತರ ಕಾಪಾಡಿ ನಮಾಜ್ ಮಾಡಬಹುದು ಎಂದರು.

    ಜಮಾತ್​ನವರು ಮಸೀದಿ ಮುಂಭಾಗದಲ್ಲಿ ಕಡ್ಡಾಯವಾಗಿ ಸ್ಯಾನಿಟೈಸರ್, ಮಾಸ್ಕ್​ಗಳನ್ನು ಇಡಬೇಕು. ಒಂದು ಮಸೀದಿಯಲ್ಲಿ 50- 50 ಜನರಂತೆ ಪಾಳಿಯಲ್ಲಿ ತೆರಳಿ ನಮಾಜ್ ಮಾಡಬಹುದು. ಗುಂಪುಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಎಲ್ಲ ಸಮುದಾಯದವರೂ ಸಹಕಾರ ನೀಡಬೇಕು ಎಂದರು.

    ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇಬ್ಬರು ಪಿಎಸ್​ಐಗಳಿಗೆ ಕರೊನಾ ಪಾಸಿಟಿವ್ ಬಂದಿದೆ. ವಿವಿಧ ಠಾಣೆಗಳ 12 ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ ಜನರಿಗಾಗಿಯೇ ಕೆಲಸ ಮಾಡುತ್ತಿರುವ ಪೊಲೀಸರಿಗೆ ಎಲ್ಲರೂ ಸಹಕಾರ ನೀಡಬೇಕು ಎಂದರು.

    ಡಿವೈಎಸ್​ಪಿ ರವಿ ನಾಯ್ಕ ಹಾಗೂ ಪೊಲೀಸ್ ಸಿಬ್ಬಂದಿ, ವಿವಿಧ ಜಮಾತ್​ಗಳ ಮುಸ್ಲಿಂ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts