More

    ಮಸ್ಟರಿಂಗ್ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ

    ಧಾರವಾಡ: ಮತದಾನದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಮಂಗಳವಾರ ಮಸ್ಟರಿಂಗ್ ಕಾರ್ಯ ಜರುಗಿತು. ಧಾರವಾಡ ತಹಸೀಲ್ದಾರ್ ಕಚೇರಿ ಆವರಣದ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು. ಮತಗಟ್ಟೆಗೆ ತೆರಳುವ ಅಧಿಕಾರಿ, ಸಿಬ್ಬಂದಿಗೆ ಹಸ್ತಾಂತರಿಸಲು ಸಿದ್ಧಪಡಿಸಿರುವ ಚುನಾವಣಾ ಸಾಮಗ್ರಿಗಳು, ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಕ್ಕಾಗಿ ನೀಡಲಾಗಿರುವ ಮಾಸ್ಕ್, ಹ್ಯಾಂಡ್​ಗ್ಲೌಸ್ ಮತ್ತಿತರ ಪರಿಕರಗಳನ್ನು ಪರಿಶೀಲಿಸಿದರು.

    ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಧಾರವಾಡ ಜಿಲ್ಲೆಯಲ್ಲಿ 1,549 , ಗದಗ 15,978, ಹಾವೇರಿ 3,593 ಹಾಗೂ ಉತ್ತರ ಕನ್ನಡ 13,148 ಸೇರಿ ಒಟ್ಟು 74,268 ಮತದಾರರು ಇದ್ದಾರೆ. ಧಾರವಾಡ ಜಿಲ್ಲೆಯ 54 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅ. 28ರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts