More

    ಮಹದಾಯಿ ಯೋಜನೆ ಅನುಷ್ಠಾನಕ್ಕೆ ಬದ್ಧ

    ನವಲಗುಂದ: ಮಹದಾಯಿ, ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಬಜೆಟ್​ನಲ್ಲಿ 500 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಆದಕ್ಕೆ ಪೂರಕವಾಗಿ ಸಂಬಂಧಿಸಿದ ಇಲಾಖೆಗಳ ಅನುಮತಿ ಪಡೆದುಕೊಂಡು ಕಾಮಗಾರಿ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

    ಪಟ್ಟಣದ ಮಹದಾಯಿ, ಕಳಸಾ ಬಂಡೂರಿ ರೈತ ಹೋರಾಟ ವೇದಿಕೆಯ ಮುಖಂಡರನ್ನು ಭಾನುವಾರ ಭೇಟಿ ಮಾಡಿ ಮಾತನಾಡಿದರು. ರೈತರು ಕುಡಿಯುವ ನೀರಿನ ಹಕ್ಕಿಗಾಗಿ ಹೋರಾಟ ಮಾಡಿದ್ದರು. ಜತೆಗೆ ಬಿಜೆಪಿ ಜನಪ್ರತಿನಿಧಿಗಳು ರೈತರ ಧ್ವನಿಯಾಗಿ ನಿಂತು ಯೋಜನೆ ಸಾಕಾರಗೊಳಿಸುವಲ್ಲಿ ಯಶಸ್ಸು ಕಂಡಿದ್ದಾರೆ. ಅಗತ್ಯಬಿದ್ದರೆ, ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು. ಮಹದಾಯಿ ಯೋಜನೆ ಜಾರಿಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ಭರವಸೆ ನೀಡಿದರು.

    ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ರೈತರ ಹೋರಾಟಕ್ಕೆ ಯಾವಾಗಲೂ ಚಿರಋಣಿಯಾಗಿರುತ್ತೇನೆ. ಮಹದಾಯಿ ನೀರು ಹರಿಯುವತನಕ ಬೆಂಬಲ ನೀಡುತ್ತೇನೆ. ನೆಲ, ಜಲ, ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದರು.

    ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಾತನಾಡಿದರು. ರೈತ ಮುಖಂಡರು ಜನಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಿದರು.

    ಚೈತ್ರಾ ಶಿರೂರ, ಬಸಪ್ಪ ಬೀರಣ್ಣವರ, ಸುಭಾಸಚಂದ್ರಗೌಡ ಪಾಟೀಲ, ಮಲ್ಲೇಶ ಉಪ್ಪಾರ, ಸಂಗಪ್ಪ ನಿಡವಣಿ, ಬಾಬಾಜಾನ ಮುಧೋಳ, ಬಸಣ್ಣ ಬೆಳವಣಕಿ, ಸಿದ್ದನಗೌಡ ಪಾಟೀಲ, ಸಿದ್ದಣ್ಣ ಕಿಟಗೇರಿ, ಜಿ.ಪಂ. ಸದಸ್ಯ ಎ.ಬಿ. ಹಿರೇಮಠ, ಪೂರ್ಣಿಮಾ ಜೋಶಿ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts