More

    ಮಹಾಂತ ಶಿವಯೋಗಿಗಳ ಪುಣ್ಯಸ್ಮರಣೋತ್ಸವ

    ಮುರಗೋಡ: ಸ್ಥಳೀಯ ಮಹಾಂತ ದುರದುಂಡೇಶ್ವರ ಮಠದ ಲಿಂ. ಮಹಾಂತ ಶಿವಯೋಗಿಗಳ 51ನೇ ಪುಣ್ಯಸ್ಮರಣೋತ್ಸವ ಹಾಗೂ ಪೀಠಾಧಿಕಾರಿ ನೀಲಕಂಠ ಸ್ವಾಮೀಜಿ ಅವರ 75ನೇ ವರ್ಷದ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ 45 ದಿನಗಳ ಬಸವ ಪುರಾಣ ಮಹಾ ಮಂಗಲೋತ್ಸವ ಹಾಗೂ ಮಹಾರಥೋತ್ಸವ ೆ.28ರಿಂದ ಮಾ. 3ರ ವರೆಗೆ ಅದ್ದೂರಿಯಾಗಿ ಜರುಗಲಿದೆ.

    ಫೆ.28ರಂದು ಬೆಳಗ್ಗೆ ಶ್ರೀಮಠದಲ್ಲಿ ಷಟಸ್ಥಲ ಧ್ವಜಾರೋಹಣವನ್ನು ಹೊಸೂರ-ಬೈಲಹೊಂಗಲ ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮೀಜಿ ನೆರವೇರಿಸಲಿದ್ದಾರೆ. ಸಂಜೆ ಮಹಿಳಾ ಗೋಷ್ಠಿ ಹಾಗೂ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಲಿದೆ. ಗವಿಸಿದ್ದೇಶ್ವರ ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ, ಗುರುಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಉದ್ಘಾಟಕರಾಗಿ ಸಚಿವೆ ಶಶಿಕಲಾ ಜೊಲ್ಲೆ ಆಗಮಿಸುವರು. ಸಂಸದೆ ಮಂಗಲ ಅಂಗಡಿ, ಶಾಸಕಿಯರಾದ ಅಂಜಲಿ ನಿಂಬಾಳ್ಕರ್, ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಳ್ಳಲಿದ್ದಾರೆ.

    ಮಾ.1ರಂದು ಬೆಳಗ್ಗೆ ಶ್ರೀ ಮಹಾಂತ ಗುರುಭವನದ ಶಂಕು ಸ್ಥಾಪನೆ ಜರುಗಲಿದೆ. ಮಹಾಂತ ಸ್ವಾಮೀಜಿ, ನೀಲಕಂಠ ಸ್ವಾಮೀಜಿ, ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ರುದ್ರಮುನಿ ಶಿವಾಚಾರ್ಯರು, ಶಾಸಕ ಮಹಾಂತೇಶ ಕೌಜಲಗಿ, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ, ಕಾಡಾ ಅಧ್ಯಕ್ಷ ಡಾ. ವಿ.ಐ.ಪಾಟೀಲ, ಮಾಜಿ ಶಾಸಕ ಜಗದೀಶ ಮೆಟಗುಡ್ಡ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10.30ಕ್ಕೆ ರಾಜ್ಯಮಟ್ಟದ ಸಂಸ್ಕೃತ ಪಾಠಶಾಲಾ ಗುರುಕುಲ ಸಮಾವೇಶ ಜರುಗಲಿದೆ. ಸದ್ಧರ್ಮ ಉಜ್ಜಯಿನಿಯ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಭಗವತ್ಪಾದರು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯರು ಭಾಗವಹಿಸಲಿದ್ದಾರೆ.

    ಜ. 19ರಿಂದ ಕುಂದರಗಿ ಅಮರ ಸಿದ್ದೇಶ್ವರ ಸ್ವಾಮೀಜಿ, ಉಪ್ಪಿನ ಬೆಟಗೇರಿಯ ಕುಮಾರ ವಿರೂಪಾಕ್ಷ ಸ್ವಾಮೀಜಿ ನೇತೃತ್ವದಲ್ಲಿ ಜರುಗಿದ 45 ದಿನಗಳ ಬಸವ ಪುರಾಣದ ಮಹಾಮಂಗಲೋತ್ಸವ ಮಾ.1ರಂದು ಜರುಗಲಿದೆ. ಮಾ. 2ರಂದು ಬೆಳಗ್ಗೆ 9 ಗಂಟೆಗೆ ಕುಂಭ, ಕಳಸ, ಆರತಿ, ವಿವಿಧ ಸಾಂಸ್ಕೃತಿಕ ವಾದ್ಯಮೇಳದೂದಿಗೆ ಪೀಠಾಧಿಕಾರಿ ನೀಲಕಂಠ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಲಿದೆ.

    ಸಿದ್ದರಾಮ ಸ್ವಾಮೀಜಿ, ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಕೀರ ಸಿದ್ದರಾಮ ಸ್ವಾಮೀಜಿ, ದಿವಾರ ದೀಕ್ಷಿತ್ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ, ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ ಪಾಲ್ಗೊಳ್ಳಲಿದ್ದಾರೆ. ಮಾ.3ರಂದು ಬೆಳಗ್ಗೆ ಲಿಂ.ಮಹಾಂತ ಶಿವಯೋಗಿಗಳ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, 12.30ಕ್ಕೆ ಸರ್ವಧರ್ಮ ಸಾಮೂಹಿಕ ವಿವಾಹ ಜರುಗಲಿವೆ. ಮಧ್ಯಾಹ್ನ 3 ಗಂಟೆಗೆ ಲಿಂ. ಮಹಾಂತ ಶಿವಯೋಗಿಗಳ 51ನೇ ಪುಣ್ಯಸ್ಮರಣೋತ್ಸವ ನಿಮಿತ್ತ ಹರಗುರು ಚರಮೂರ್ತಿಗಳು ಮತ್ತು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ಜರುಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts