More

    ಮಹಾತ್ಮರ ಜೀವನ ಚರಿತ್ರೆ ಅರಿತುಕೊಳ್ಳಿ

    ಯಾದಗಿರಿ: ಆಧ್ಯಾತ್ಮದ ಮೂಲಕ ಸಮಾಜವನ್ನು ಸರಿದಾರಿಗೆ ತರುವಲ್ಲಿ ಶ್ರಮಿಸಿದ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜೀವನಾದರ್ಶವನ್ನು ಪ್ರತಿಯೊಬ್ಬರು ಪಾಲಿಸುವಂತೆ ಜಿಪಂ ಸಿಇಒ ಅಮರೇಶ ಆರ್.ನಾಯ್ಕ್ ಕರೆ ನೀಡಿದರು.

    ಬುಧವಾರ ನಗರದ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಬಂಜಾರ ಸಮಾಜದ ಆರಾಧ್ಯ ದೈವ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿ, ಮಹಾರಾಜರು ಸಮಾಜದ ಸುಧಾರಣೆಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಅವರು ಪ್ರಾಮಾಣಿಕತೆ, ನಿಸ್ವಾರ್ಥ ಮನೋಭಾವ ಹಾಗೂ ಸಂಘಟನಾ ಚತುರತೆಯನ್ನು ಹೊಂದಿದ್ದರು ಎಂದರು.

    ಯುವ ಜನತೆ ಇಂಥ ಮಹಾತ್ಮರ ಜೀವನ ಚರಿತ್ರೆ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಸಕರ್ಾರದಿಂದಲೇ ಜಯಂತಿ ಆಚರಣೆ ಮಾಡಲಾಗುತ್ತಿದೆ. ಬಾಲಬ್ರಹ್ಮಚಾರಿಯಾಗಿ ತಪಸ್ಸು, ಧ್ಯಾನ ಮತ್ತು ಭಕ್ತಿ ಮೂಲಕ ಧಾಮರ್ಿಕತೆಯನ್ನು ಒಪ್ಪಿಕೊಂಡು ಜನಸೇವೆ ಮಾಡಿ, ಜನರಿಗೆ ಏಕತೆಯನ್ನು ಸಾರಿದ ಸೇವಾಲಾಲ್ರು ಕಾಲಜ್ಞಾನಿಯಾಗಿದ್ದಾರೆ. ಇಂದಿನ ಜನರು ಸಾಂಸ್ಕೃತಿಕ ನೆಲೆಯಲ್ಲಿ ತನ್ನ ಅಸ್ಮಿತೆಯನ್ನು ಗುರುತಿಸಿಕೊಳ್ಳಲು ಅವರು ಮಾಡಿದ ಸತ್ಕಾರ್ಯಗಳೇ ಕಾರಣ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts