More

    ಮಹಾಪುರುಷರ ಜಯಂತಿ ಅರ್ಥಪೂರ್ಣ ಆಚರಣೆ

    ಬಾಗಲಕೋಟೆ: ಜಿಲ್ಲೆಯಲ್ಲಿ ಡಿಸೆಂಬರ 29 ರಂದು ಜರಗುವ ವಿಶ್ವ ಮಾನವ ದಿನಾಚರಣೆ, ಜನವರಿ 1 ರಂದು ಅಮರಶಿಲ್ಪಿ ಜಕನಾಚಾರಿ ಸಂಸ್ಕರಣಾ ದಿನಾಚರಣೆ, ಜನವರಿ 15 ಶಿವಯೋಗಿ ಸಿದ್ದರಾಮ ಜಯಂತಿ, ಜನವರಿ 19 ರಂದು ಜರಗುವ ಮಹಾಯೋಗಿ ವೇಮನ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ತಿಳಿಸಿದರು.

    ಜಿಲ್ಲಾ ಪಂಚಾಯತ ಸಭಾಭವನದಲ್ಲಿ ವಿವಿಧ ಮಹಾಪುರುಷರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿ ವರ್ಷದಂತೆ ಈ ವರ್ಷವೂ ಮಹಾಪುರುಷರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ವಿಶ್ವ ಮಾನವ ದಿನಾಚರಣೆಯನ್ನು ನವನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಉಳಿದ ಮಹಾಪುರುಷರ ಜಯಂತಿಯನ್ನು ಅಂಬೇಡ್ಕರ ಭವನದಲ್ಲಿ ಆಚರಿಸಲು ನಿರ್ಧರಿಸಲಾಯಿತು.

    ಜಯಂತಿ ಆಚರಣೆ ಕುರಿತಂತೆ ವಿವಿಧ ಸಮುದಾಯ ಮುಖಂಡರ ಸಲಹೆಗಳನ್ನು ಪಡೆಯಲಾಯಿತು. ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ, ವೇದಿಕೆ, ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳನ್ನು ಆಹ್ವಾನಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ತಿಳಿಸಿದರು. ಉತ್ತಮ ಉಪನ್ಯಾಸಕರನ್ನು ಆಹ್ವಾನಿಸಲು ತಿಳಿಸಲಾಯಿತು. ತಾಲೂಕಾ ಮಟ್ಟದಲ್ಲಿಯೂ ಆಚರಣೆ ಮಾಡಲಾಗುತ್ತಿದೆ. ಸಮುದಾಯ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿಕೊಂಡರು.

    ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೇನ್ನವರ, ಜಿಲ್ಲಾ ಆಯುಷ ಅಧಿಕಾರಿ ಅಕ್ಕಮಹಾದೇವಿ ಗಾಣಿಗೇರ, ನಗರಸಭೆ ಪೌರಾಯುಕ್ತ ರಮೇಶ ಜಾದವ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಸೇರಿದಂತೆ ವಿವಿಧ ಸಮುದಾಯ ಮುಖಂಡರಾದ ಸಂಗಣ್ಣ ಹಡಗಲಿ, ಮಹೇಶ ಕಕ್ಕರೆಡ್ಡಿ, ಎಸ್.ಬಿ.ಮಾಚ, ಬ್ರಹ್ಮಋಷಿ ಪಾತ್ರೋಟ, ಸಿದ್ರಾಮ ಪಾತ್ರೋಟ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts