More

    ಮಹಿಳಾ ಕಾಲೇಜು-ಹಾಸ್ಟೆಲ್‌ಗಳಿಗೆ ಪೊಲೀಸ್ ಬೀಟ್ ವ್ಯವಸ್ಥೆ-ಎಸ್ಪಿ

    ದಾವಣಗೆರೆ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಮಹಿಳಾ ಸುರಕ್ಷತೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಮಹಿಳಾ ಕಾಲೇಜು ಹಾಗೂ ಹಾಸ್ಟೆಲ್‌ಗಳಿಗೆ ಪೊಲೀಸ್ ಬೀಟ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
    ಬೀಟ್ ವ್ಯವಸ್ಥೆಯಲ್ಲಿ ಪೊಲೀಸ್ ಸಿಬ್ಬಂದಿ ಪ್ರತಿದಿನ ಕಾಲೇಜುಗಳ ಆರಂಭ ಹಾಗೂ ಮುಕ್ತಾಯದ ಸಮಯದಲ್ಲಿ ಭೇಟಿ ನೀಡಿ ಆಡಳಿತ ಅಧಿಕಾರಿ ಮತ್ತು ನೌಕರರನ್ನು ಭೇಟಿ ಮಾಡಿ ವಿದ್ಯಾರ್ಥಿನಿಯರೊಂದಿಗೆ ಸಂವಹನ ನಡೆಸಲಿದ್ದಾರೆ.
    ಕಾಲೇಜುಗಳ ಆವರಣದಲ್ಲಿ ಕಿಡಿಗೇಡಿಗಳ ಕೀಟಲೆ, ಚುಡಾಯಿಸುವುದು ಮತ್ತು ಅನುಮಾನಾಸ್ಪದ ವ್ಯಕ್ತಿಗಳ ಓಡಾಟದ ಮೇಲೆ ನಿಗಾ ವಹಿಸುವರು. ತುರ್ತು ಸಹಾಯವಾಣಿ 112 ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವರು.
    ಅಲ್ಲದೇ ಮಹಿಳಾ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಹಾಸ್ಟೆಲ್ ನಿರ್ವಹಣೆ ಅಧಿಕಾರಿ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ.
    ಪೊಲೀಸ್ ಉಪ ವಿಭಾಗದ ಮಟ್ಟದಲ್ಲಿ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಮಹಿಳಾ ಕಾಲೇಜು ಹಾಗೂ ಹಾಸ್ಟೆಲ್‌ಗಳ ಅಧಿಕಾರಿ, ಸಿಬ್ಬಂದಿ ಸಭೆ ನಡೆಸುವುದು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸುವ ಮೂಲಕ ಮಹಿಳಾ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
    ಜಿಲ್ಲೆಯ ದಾವಣಗೆರೆ ನಗರ ಪೊಲೀಸ್ ಉಪ ವಿಭಾಗದಲ್ಲಿ 110, ದಾವಣಗೆರೆ ಗ್ರಾಮಾಂತರ ಪೊಲೀಸ್ ಉಪ ವಿಭಾಗದಲ್ಲಿ 74 ಹಾಗೂ ಚನ್ನಗಿರಿ ಪೊಲೀಸ್ ಉಪ ವಿಭಾಗ 61 ಸೇರಿ ಒಟ್ಟು 245 ಮಹಿಳಾ ಕಾಲೇಜು ಹಾಗೂ ಹಾಸ್ಟೆಲ್‌ಗಳಿಗೆ ಬೀಟ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts