More

    ಮಹಿಳಾ, ಮಕ್ಕಳ ಕಾನೂನಿನ ಅರಿವಿರಲಿ


    ಚಾಮರಾಜನಗರ: ಪ್ರತಿಯೊಬ್ಬರಿಗೂ ಮಕ್ಕಳು ಹಾಗೂ ಮಹಿಳೆಯರ ಹಕ್ಕುಗಳಿಗೆ ಸಂಬಂಧಿಸಿದ ಕಾನೂನುಗಳ ಬಗ್ಗೆ ಅರಿವು ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ್ ಹೇಳಿದರು.


    ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ವತಿಯಿಂದ ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


    ಮಕ್ಕಳ ಮತ್ತು ಮಹಿಳೆಯರ ಕಾನೂನು ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಕಾನೂನಿನ ಅರಿವಿನ ಕೊರತೆ ಇರುವುದರಿಂದ ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ, ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಕುಡಿದು ಹಿಂಸೆ ಕೊಡುವುದು ಈ ರೀತಿ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಈ ನಿಟ್ಟಿನಲ್ಲಿ ಅಪರಾಧ ತಡೆಗಟ್ಟುವಲ್ಲಿ ಗ್ರಾಮಸ್ಥರ ಪಾತ್ರ ಬಹಳ ಮುಖ್ಯ ಎಂದರು.


    ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶ ಶಿವಕುಮಾರ್, ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ಪ್ರತಿಮಾ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts