More

    ಮಹಿಳಾ ಶೋಷಣೆ ಮುಕ್ತ ನಾಡು ಅಗತ್ಯ

    ಹೊಳಲ್ಕೆರೆ: ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಹಿಂಸೆ, ಶೋಷಣೆ ತಡೆಗಟ್ಟಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್.ರೇಖಾ ತಿಳಿಸಿದರು.

    ಪಟ್ಟಣದ ಮಿನಿ ವಿಧಾನ ಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಹಾಗೂ ಹೆಣ್ಣು ಮಕ್ಕಳ ರಕ್ಷಣೆ ಕುರಿತು ನಿಷೇಧಾಧಿಕಾರಿಗಳಿಗೆ ತರಬೇತಿ ಕಾರ‌್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲವಾಗಿದೆ. ಇದು ಗಂಭೀರ ಸಮಸ್ಯೆ. ಹೆಣ್ಣು ಮಕ್ಕಳು ಸದೃಢವಾಗಿದ್ದರೂ, ಸಾಕಷ್ಟು ನೋವುಗಳ ಜತೆಯಲ್ಲಿದ್ದಾರೆ. ಇಂದು ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ. ಆದರೂ ಪ್ರತಿಯೊಂದು ಹಂತದಲ್ಲೂ ಶೋಷಣೆ ನಡೆಯುತ್ತಲೇ ಇದೆ. ಸ್ವತಂತ್ರವಾಗಿ ಬದುಕಲು ಸಾಧ್ಯವಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

    ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ತಿಪ್ಪೇಸ್ವಾಮಿ ಮಾತನಾಡಿ, ದೇಶದ ಜನಸಂಖ್ಯೆಯಲ್ಲಿ ಶೇ.46 ರಷ್ಟು ಮಕ್ಕಳಿದ್ದಾರೆ. ಶೇ.67ರಷ್ಟು ಗ್ರಾಮೀಣ ಪ್ರದೇಶದಲ್ಲಿದ್ದಾರೆ. ದೇಶದಲ್ಲಿ ಬಹುದೊಡ್ಡ ಸಂಪನ್ಮೂಲವಾದ ಮಕ್ಕಳ ರಕ್ಷಣೆ ಮಾಡುವುದು ದೊಡ್ಡ ಸವಾಲಾಗಿದೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಶರವಣನ್ ಮಾತನಾಡಿ, ಪ್ರತಿಯೊಬ್ಬರು ಸಾಮಾಜಿಕ ಬದ್ಧತೆಯಿಂದ ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲು ಶ್ರಮಿಸಬೇಕು ಎಂದು ತಿಳಿಸಿದರು.

    ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ವಿಜಯ್, ನ್ಯಾಯಾಧೀಶ ಎಂ.ಪಿ.ಉಮೇಶ್, ನಿರುಪಮಾ ರೇಣಕಪ್ಪ ಢಂಗ, ವಕೀಲರ ಸಂಘದ ತಾಲೂಕಾಧ್ಯಕ್ಷ ಎಲ್.ಕೆ.ಶಿವಕುಮಾರ್, ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಬಾಲ ನ್ಯಾಯ ಮಂಡಳಿ ಸದಸ್ಯೆ ಸಿ.ಸವಿತಾ, ಯೂನಿಸೆಫ್ ರಾಜ್ಯ ಸಂಯೋಜಕ ರಾಘವೇಂದ್ರ ಭಟ್ ಇದ್ದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ಜಿಪಂ, ತಾಪಂ, ಆರೋಗ್ಯ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts