More

    ಮಹಿಳೆಯರಿಗೆ ಆರ್ಥಿಕ ನೆರವು ನೀಡಲು ಸಿದ್ಧ

    ಹುಕ್ಕೇರಿ: ಕುಟುಂಬದ ಆರ್ಥಿಕತೆಗೆ ಶ್ರಮಿಸುವ ಮಹಿಳೆಯರಿಗೆ ಎಲ್ಲ ಸಹಾಯ, ಸಹಕಾರ ನೀಡಲು ಸಿದ್ಧ. ಗೃಹ ಉತ್ಪನ್ನ ತಯಾರಿಕಾ ಘಟಕ ಪ್ರಾರಂಭಿಸಲು ತರಬೇತಿ ಮತ್ತು ಸರ್ಕಾರ ಹಾಗೂ ಬ್ಯಾಂಕ್‌ಗಳ ಮೂಲಕ ಆರ್ಥಿಕ ನೆರವು ಕಲ್ಪಿಸುವುದಾಗಿ ಅರಣ್ಯ, ಆಹಾರ ಇಲಾಖೆ ಸಚಿವ ಉಮೇಶ ಕತ್ತಿ ಭರವಸೆ ನೀಡಿದರು.

    ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹುಕ್ಕೇರಿ ಮತಕ್ಷೇತ್ರದ 40 ಸೀ ಶಕ್ತಿ ಗುಂಪುಗಳಿಗೆ ಅಮೃತ ಸ್ವ ಸಹಾಯ ಕಿರು ಉದ್ದಿಮೆ ಯೋಜನೆಯಡಿ ಚೆಕ್ ವಿತರಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ಪುರುಷರಿಗೆ ಸರಿಸಮನಾಗಿ ದುಡಿದು ಮನೆ ನಿರ್ವಹಣೆ ಮಾಡುವ ಮಹಿಳೆಯರು ಆರ್ಥಿಕ ಸ್ವಾವಲಂಬನೆ ಜತೆಗೆ ಕುಟುಂಬಕ್ಕೆ ಆರ್ಥಿಕ ನೆರವು ಕಲ್ಪಿಸುವ ನಿಟ್ಟಿನಲ್ಲಿ ಮಹಿಳೆಯರು ಕೈಗೊಳ್ಳುವ ಉದ್ಯೋಗಗಳನ್ನು ಕಿರು ಉದ್ದಿಮೆಗಳಾಗಿ ಪರಿವರ್ತಿಸುವ ದೃಷ್ಟಿಯಿಂದ ಪ್ರತಿ ಗುಂಪಿಗೆ ತಲಾ ಒಂದು ಲಕ್ಷ ರೂ. ವೆಚ್ಚದಲ್ಲಿ ಬೀಜಧನ ನೀಡಲಾಗುತ್ತಿದೆ ಎಂದರು.

    ಕಿರು ಉದ್ದಿಮೆ ಪ್ರಾರಂಭಿಸಲು ಸೂಕ್ತ ಮಾರ್ಗದರ್ಶನ ಮತ್ತು ಅವುಗಳ ಮಾರಾಟಕ್ಕೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ವಿಶೇಷ ತರಬೇತಿ ನೀಡಲು ಅಧಿಕಾರಿಗಳಿಗೆ ನಿರ್ದೇಶಿಸಿದರು. ಸ್ವ ಸಹಾಯ ಗುಂಪಿನ ಕೆಲ ಪ್ರತಿನಿಧಿ ಗಳು ಸಚಿವರೊಂದಿಗೆ ಸಂವಾದ ನಡೆಸಿ ಉದ್ದಿಮೆ ಕುರಿತು ಚರ್ಚಿಸಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಶ್ರೀದೇವಿ ಅಂಗಡಿ ಉಪನ್ಯಾಸ ನೀಡಿದರು. ತಾಲೂಕು ಪಂಚಾಯಿತಿ ಇಒ ಉಮೇಶ ಸಿದ್ನಾಳ ಮಾತನಾಡಿ, ಗೃಹ ಉದ್ದಿಮೆ ಮತ್ತು ಸರ್ಕಾರದ ನೆರವು ಕುರಿತು ಮಾಹಿತಿ ನೀಡಿದರು.

    ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಪರಗೌಡ ಪಾಟೀಲ, ಅಸಂಘಟಿತ ವಲಯ ಕಾರ್ಮಿಕರ ಸಂಘಟನೆ ತಾಲೂಕಾಧ್ಯಕ್ಷ ಭೀಮಶಿ ಗೋರಕನಾಥ, ಜಿಪಂ ಆಡಳಿತ ವಿಭಾಗದ ಉಪ ಕಾರ್ಯದರ್ಶಿ ಬಿ.ಕೆ.ಲಾಳಿ, ತಹಸೀಲ್ದಾರ್ ಡಾ.ಡಿ.ಎಚ್.ಹೂಗಾರ, ಸಿಡಿಪಿಒ ಮಂಜುನಾಥ ಪರಸಣ್ಣವರ, ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಂ.ಎಸ್.ಪಟಗುಂದಿ, ತಾತ್ಯಾಸಾಹೇಬ ನಾಂದನಿ, ಅಕ್ಷರ ದಾಸೋಹ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಹಿರೇಮಠ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts