More

    ಮಹಿಳೆಯರು ತಮ್ಮ ಹಕ್ಕಗಳನ್ನರಿತು ಚಲಾಯಿಸಬೇಕು

    ಚಿತ್ರದುರ್ಗ: ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳಿದ್ದು, ಮಹಿಳೆಯರು ಇದನ್ನರಿತು ಚಲಾಯಿಸಬೇಕು ಎಂದು ವಕೀಲ ಬಿ.ಕೆ.ರಹಮತ್ ವುಲ್ಲಾ ಹೇಳಿದರು.
    ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಪತ್ರಕರ್ತರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
    ಸತಿಸಹಗಮನ ಪದ್ಧತಿಯನ್ನು ರಾಜಾರಾಮ್ ಮೋಹನ್‌ರಾಯ್ ವಿರೋಧಿಸಿದ್ದರು. ಮಹಿಳೆ ಎದುರಿಸುವ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕಾನೂನಿನಲ್ಲಿ ಸಾಕಷ್ಟು ಅವಕಾಶಗಳಿವೆ ಎಂಬುದರ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ರಾಜಕಾರಣದಲ್ಲೂ ಮಹಿಳೆಯರಿಗೆ ಮೀಸಲು ದೊರೆತಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಲೂ ಟಿಯಾಗಿದೆ ಎಂದು ಆರೋಪಿಸಿದ ಅವರು, ಚುನಾವಣೆಯಲ್ಲಿ ಆಸೆ ಆಮಿಷಗಳಿಗೆ ಬಲಿಯಾಗದೆ ಮತ ಚಲಾಯಿಸುವ ಮೂಲಕ ಯೋಗ್ಯರನ್ನು ಆಯ್ಕೆ ಮಾಡಬೇಕಿದೆ. ಕೊಳಗೇರಿ ನಿವಾಸಿಗಳು ಮಕ್ಕಳಿಗೆ ತಪ್ಪದೆ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಸಾಧ್ಯ ಎಂದರು.
    ವಕೀಲೆ ದಿಲ್‌ಶಾದ್‌ಉನ್ನಿಸಾ ಮಾತನಾಡಿ, ಹೆಣ್ಣು-ಗಂಡೆಂಬ ತಾರತಮ್ಯ ಹಿಂದಿನಿಂದಲೂ ಇದೆ. ಈಗಲೂ ಮರೆಯಾಗಿಲ್ಲ. ಆದರೆ, ಸಂವಿಧಾನದಲ್ಲಿ ಹೆಣ್ಣು-ಗಂಡೆಂಬ ಭೇದವಿಲ್ಲ. ಎಲ್ಲರಿಗೂ ಸಮಾನ ಅವಕಾಶವಿದೆ. ಸಮಾನತೆ, ಸ್ವಾತಂತ್ರ್ಯವನ್ನು ಮತ್ತೊಬ್ಬರಿಂದ ಕೇಳಿ ಪಡೆಯುವುದಲ್ಲ ಎಂದರು.
    ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಶಿವರಶ್ಮಿ, ಕರ್ನಾಟಕ ಶಾಂತಿ ಮತ್ತು ಸೌಹಾರ್ದ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‌ಕುಮಾರ್, ಮಹಿಳಾ ಸೇವಾ ಸಮಾಜದ ಉಪಾಧ್ಯಕ್ಷೆ ಮೋಕ್ಷಾರುದ್ರಸ್ವಾಮಿ, ಒ. ನರಸಿಂಹಮೂರ್ತಿ, ರಂಗಸ್ವಾಮಿ, ಕೆಕೆಎನ್‌ಎಸ್‌ಎಸ್ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್, ಮೈಲಾರಪ್ಪ, ಸಬೀನಾಜಾನ್,ಲೀಲಾವತಿ, ಗೀತಮ್ಮ, ಶಿವಲಿಂಗಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts