More

    ಮಾಂಜ್ರಾ ನದಿಗೆ ನೀರು ಬಿಡುಗಡೆ ಮಾಡಿ

    ಔರಾದ್: ಸಂಗಮ, ಹಾಲಹಳ್ಳಿ, ಕಂದಗೂಳ ಇತರ ಗ್ರಾಮಗಳಲ್ಲಿ ಕುಡಿವ ನೀರಿನ ತೀವ್ರ ಸಮಸ್ಯೆಯಾಗುತ್ತಿದೆ. ಜನ ಮತ್ತು ಜಾನುವಾರುಗಳಿಗೆ ಸಮರ್ಪಕ ಜೀವಜಲ ಪೂರೈಸಲು ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಹರಿಸಬೇಕು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

    ಬೇಸಿಗೆ ಆರಂಭವಾಗಿದ್ದು, ಔರಾದ್ ಮತ್ತು ಕಮಲನಗರ ತಾಲೂಕಿನ ಕೆಲವೆಡೆ ಕುಡಿಯುವ ನೀರಿನ ಕೊರತೆಯಾಗುತ್ತಿದೆ. ಬೇಸಿಗೆ ಅವಧಿಯಲ್ಲಿ ಸಹಜವೇ ಈ ಸಮಸ್ಯೆ ಎದುರಾಗುತ್ತದೆ. ಪಶು-ಪಕ್ಷಿಗಳು ಮತ್ತು ಸಾರ್ವಜನಿಕರಿಗೆ ಪರದಾಡುತ್ತಿದ್ದು, ಮಾಂಜ್ರಾ ನದಿಗೆ ನೀರು ಹರಿಸಿದಲ್ಲಿ ಸುಮಾರು 30 ಗ್ರಾಮ ಹಾಗೂ ಭಾಲ್ಕಿ ತಾಲೂಕಿನ ಹಲವು ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

    ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಯಾವ ಗ್ರಾಮದಲ್ಲಿ ನೀರಿನ ಸಮಸ್ಯೆಯಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ. ಮಾಂಜ್ರಾಕ್ಕೆ ನೀರು ಹರಿಸುವ ಬಗ್ಗೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದು ತಿಳಿಸಿದ್ದೇನೆ. ಶನಿವಾರದಿಂದ ನೀರು ಹರಿಸುವಂತೆ ದೂರವಾಣಿ ಮುಖಾಂತರ ಜಿಲ್ಲಾಧಿಕಾರಿಗೆ ನಿದರ್ೇಶನ ನೀಡಿರುವೆ ಎಂದು ಹೇಳಿದ್ದಾರೆ.

    ತೀವ್ರ ಸಮಸ್ಯೆಯಿರುವ ಗ್ರಾಮಗಳಿಗೆ ತುತರ್ಾಗಿ ಪಯರ್ಾಯ ವ್ಯವಸ್ಥೆ ಕಲ್ಪಿಸಬೇಕು. ಮೋಟಾರ್ ಕೆಟ್ಟಿರುವುದು, ವಿದ್ಯುತ್ ಪರಿಕರ ಹಾನಿಯಂಥ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ತಕ್ಷಣ ಸರಿಪಡಿಸಿಕೊಳ್ಳಬೇಕು. ನೀರಿನ ಸಂಪನ್ಮೂಲಗಳಿರುವ ಗ್ರಾಮಗಳಲ್ಲಿ ಯಾವ ಕಾರಣಕ್ಕೂ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ನೀರಿನ ಸಂಪನ್ಮೂಲಗಳಿರದ ಕಡೆ ಪಯರ್ಾಯ ವ್ಯವಸ್ಥೆ ಮಾಡಬೇಕು ಎಂದು ಸಚಿವರು ತಿಳಿಸಿದ್ದಾರೆ.

    ಬರುವ ದಿನಗಳಲ್ಲಿ ನೀರಿನ ಅಭಾವ ಎದುರಾಗುವ ಗ್ರಾಮಗಳ ಪಟ್ಟಿಯನ್ನು ಮುಂಚಿತ ಸಿದ್ಧಪಡಿಸಿ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಎಲ್ಲ ಅಧಿಕಾರಿಗಳು ಈ ವಿಷಯ ಗಂಭೀರ ಪರಿಗಣಿಸಬೇಕು. ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು.
    | ಪ್ರಭು ಚವ್ಹಾಣ್, ಪಶು ಸಂಗೋಪನೆ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts