

ಗಂಗಾವತಿ(ಕೊಪ್ಪಳ):ರಾಜವಂಶಸ್ಥ, ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ರಾಜಾಶ್ರೀರಂಗದೇವರಾಯಲು (87) ಮಂಗಳವಾರ ನಿಧನರಾದರು.
ಡಿಸಿಸಿ ಮಾಜಿ ಅಧ್ಯಕ್ಷೆ , ಪತ್ನಿ ಲಲಿತರಾಣಿರಾಯಲು, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿ ಅಪಾರ ಬಂಧುಗಳಿದ್ದಾರೆ. ಪಾರ್ಥಿವ ಶರೀರವನ್ನು ಸಾರ್ವಜನಿಕ ದರುಶನಕ್ಕಿಡಲಾಗಿದ್ದು, ಆ.23(ಬುಧವಾರ) ಆನೆಗೊಂದಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ರಾಯಲು, ಕನಕಗಿರಿ ಕ್ಷೇತ್ರದಿಂದ 2 ಬಾರಿ ಮತ್ತು ಗಂಗಾವತಿ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, 1992ರಲ್ಲಿ ವೀರಪ್ಪ ಮೊಯ್ಲಿ ಸಂಪುಟದಲ್ಲಿ ಕಾಡಾ ಮತ್ತು ಗಡಿನಾಡು ಅಭಿವೃದ್ಧಿ ಸಚಿವರು ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಎಸ್.ಎಂ.ಕೃಷ್ಣ ಆಡಳಿತಾವಧಿಯಲ್ಲಿ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಸರಳ ಸಜ್ಜನಿಕೆಗೆ ಹೆಸರಾಗಿದ್ದ ರಾಯಲು, ಆಡಳಿತಾವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದೇ ನಿರ್ವಹಿಸಿದ್ದರು.