More

    ಮಾತೃಭಾಷೆ ಶಿಕ್ಷಣ ಪರಿಣಾಮಕಾರಿ

    ಬೆಳಗಾವಿ: ಜ್ಞಾನವನ್ನು ಅರ್ಥೈಸಿಕೊಂಡು ಅದನ್ನು ಅನುಷ್ಠಾನಗೊಳಿಸುವಲ್ಲಿ ಮಾತೃಭಾಷೆ ಶಿಕ್ಷಣ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕುಲಪತಿ ಡಾ. ಎಸ್.ವಿದ್ಯಾಶಂಕರ ಹೇಳಿದರು.

    ನಗರದ ವಿಟಿಯು ಸಭಾಂಗಣದಲ್ಲಿ ರಾಜ್ಯೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜರುಗಿದ ಕೋಟಿಕಂಠ ಗೀತಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ-2020ರ ಆಶಯದಂತೆ ಇಂಜಿನಿಯರಿಂಗ್ ಶಿಕ್ಷಣವನ್ನು ಪ್ರಾದೇಶಿಕ ಭಾಷೆಗಳಲ್ಲಿ ಆದ್ಯತೆ ನೀಡಲಾಗಿದ್ದು, ಪುಸ್ತಕ ರಚನೆ ನಡೆಯುತ್ತಿದೆ ಎಂದರು.

    ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿ ವೇತನ ಸಿಗಬೇಕು. ಅಲ್ಲದೆ, ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪೂರೈಸಿದ ಪದವೀಧರರಿಗೆ ಉದ್ಯೋಗಗಳಲ್ಲಿ ವಿಶೇಷ ಮೀಸಲಾತಿ ನೀಡಬೇಕೆಂದು ಈ ವೇದಿಕೆ ಮೂಲಕ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಹೇಳಿದರು.

    ನಮ್ಮ ನಾಡಿನ ಪರಂಪರೆ, ಸಂಸ್ಕೃತಿ ಹಾಗೂ ಭಾಷೆಗಳ ಬಗ್ಗೆ ನಮಗೆ ಅಭಿಮಾನವಿರಬೇಕು. ಜೊತೆಗೆ ಕನ್ನಡ ಭಾಷೆಯನ್ನು ನಮ್ಮ ಎಲ್ಲ ಕಾರ್ಯಚಟುವಟಿಕೆಗಳಲ್ಲಿ ಬಳಸಿಕೊಳ್ಳಬೇಕು. ಭಾಷೆ ಬೆಳವಣಿಗೆಗೆ ಪಣ ತೊಡಬೇಕು ಮತ್ತು ಕನ್ನಡೇತರರಿಗೆ ಕನ್ನಡ ಕಲಿಸಬೇಕಿದೆ ಎಂದು ಸಂಕಲ್ಪ ವಿಧಿ ಬೋಧಿಸಿದರು.
    ವಿಟಿಯು ಕುಲಸಚಿವ ಪ್ರೊ.ಬಿ.ರಂಗಸ್ವಾಮಿ, ಹಣಕಾಸು ಅಧಿಕಾರಿ ಎ.ಸಪ್ನಾ, ವೈ.ಎಸ್.ದೀಕ್ಷಿತ, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts