More

    ಮಾದಕ ವಸ್ತುಗಳಿಂದ ದೂರವಿರಿ

    ಗೋಣಿಕೊಪ್ಪ: ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಕೂರ್ಗ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್‌ನಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಅದರ ದುಷ್ಪರಿಣಾಮ, ಸೈಬರ್ ಕ್ರೈಂ ಬಗ್ಗೆ ಜಾಗೃತಿ ಮೂಡಿಸುವ ಒಂದು ದಿನದ ಕಾರ್ಯಾಗಾರವನ್ನು ಗುರುವಾರ ಏರ್ಪಡಿಸಲಾಗಿತ್ತು.

    ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಿಲ್ಲಾ ಎಸ್ಪಿ ಕೆ.ರಾಮರಾಜನ್ ಮಾತನಾಡಿ, ಮಾದಕವಸ್ತು ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಚಟಕ್ಕೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ. ಅಲ್ಲದೆ ಮಾದಕ ವಸ್ತುಗಳನ್ನು ಬಳಕೆ ಮಾಡುವುದು ಅಪರಾಧ. ಹೀಗಾಗಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.

    ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಡಾ.ಎಂ.ಸಿ.ಕಾರ್ಯಪ್ಪ ವಹಿಸಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಿ.ಪಿ. ರಾಕೇಶ್ ಪೂವಯ್ಯ, ಜಂಟಿ ಕಾರ್ಯದರ್ಶಿ ರಾಜನಂಜಪ್ಪ, ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಬಸವರಾಜ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts