More

    ಮಾಧ್ಯಮದವರಿಗೆ ಕೋವಿಡ್ 19 ಪರೀಕ್ಷೆ

    ಹುಬ್ಬಳ್ಳಿ: ಕರೊನಾ ಭೀತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ನಗರದ ಕಿಮ್ಸ್​ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೋವಿಡ್ 19 ಆರೋಗ್ಯ ತಪಾಸಣೆ ನಡೆಯಿತು.

    ಕಿಮ್್ಸ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪತ್ರಕರ್ತರ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು.

    ಸತತವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ ನಡೆಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಮಾಧ್ಯಮ ಪ್ರತಿನಿಧಿಗಳ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸಿ ಸಾರ್ಸ್ ಕೋ ವಿ -2 ವೈರಾಣು ಪರೀಕ್ಷೆಗೆ ಕಳುಹಿಸಿ ಕೊಡಲಾಗುತ್ತಿದೆ. ಏ. 28ರಂದೂ ತಪಾಸಣೆ ನಡೆಯಲಿದೆ.

    ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಮಾತನಾಡಿ, ಏ. 8ರಿಂದ ಕಿಮ್ಸ್​ನಲ್ಲಿ ಸಾರ್ಸ್ ಕೋ ವಿ-2 ವೈರಾಣು ಪತ್ತೆ ಪರೀಕ್ಷೆ ಆರಂಭಿಸಲಾಗಿದೆ. ದಿನ ಒಂದಕ್ಕೆ 200 ರಿಂದ 300 ಜನರ ಮೂಗು ಮತ್ತು ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಮಾಧ್ಯಮದವರಿಗೆ ಪರೀಕ್ಷೆ ನಡೆಸುವಂತೆ ಸರ್ಕಾರದಿಂದ ನಿರ್ದೇಶನ ಬಂದ ಹಿನ್ನೆಲೆಯಲ್ಲಿ ಪ್ರತಿದಿನ 50 ರಿಂದ 100 ಪತ್ರಕರ್ತರಿಗೆ ಪರೀಕ್ಷೆ ನಡೆಸಲಾಗುವುದು ಎಂದರು.

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ ಮಾತನಾಡಿ, ಮುಖ್ಯಮಂತ್ರಿಗಳ ಆದೇಶದಂತೆ ಜಿಲ್ಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಪತ್ತೆ ಪರೀಕ್ಷೆ ನಡೆಸಲಾಗುತ್ತಿದೆ. ಕರೊನಾ ಸೇನಾನಿಗಳಂತೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮದವರಿಗೆ ಸಂಕಷ್ಟ ಎದುರಾಗಬಹದು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಧಾರವಾಡದಲ್ಲಿ ಎರಡು ದಿನಗಳ ಹಿಂದೆ 60ಕ್ಕೂ ಹೆಚ್ಚು ಜನರಿಗೆ ತಪಾಸಣೆ ಮಾಡಲಾಗಿದೆ. ಎಲ್ಲರ ವರದಿಗಳು ನೆಗೆಟಿವ್ ಬಂದಿವೆ ಎಂದರು.

    ಪ್ರಭಾರ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ್ ಚವ್ಹಾಣ, ಡಾ. ಲಕ್ಷ್ಮೀಕಾಂತ, ಡಿಎಚ್​ಒ ಡಾ.ಯಶವಂತ ಮದೀನಕರ, ವಾರ್ತಾ ಇಲಾಖೆಯ ವಿನೋದಕುಮಾರ್, ವೇಣುಗೋಪಾಲ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts