More

    ಮಾಧ್ಯಮ ಮಾಣಿಕ್ಯ ಪ್ರಶಸ್ತಿ ಪ್ರದಾನ ನಾಳೆ

    ದಾವಣಗೆರೆ: ಪತ್ರಿಕಾ ದಿನಾಚರಣೆ ಪ್ರಯುಕ್ತ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಲಯನ್ಸ್ ಭವನದಲ್ಲಿ ಜುಲೈ 23ರಂದು ಪತ್ರಿಕಾ ದಿನಾಚರಣೆ, ಮಾಧ್ಯಮ ಮಾಣಿಕ್ಯ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಇ.ಎಂ. ಮಂಜುನಾಥ್ ತಿಳಿಸಿದರು.

    ಭಾನುವಾರ ಬೆಳಗ್ಗೆ 10.45ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮಾಧ್ಯಮದ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುವ 12 ಜನರಿಗೆ ಮಾಧ್ಯಮ ಮಾಣಿಕ್ಯ ಪ್ರಶಸ್ತಿ ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.80ಕ್ಕೂ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ವಿದ್ಯಾಸಿರಿ ಮತ್ತು ವಿದ್ಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಹುಬ್ಬಳ್ಳಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರಾದ ನಿರ್ಮಲಾಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕಾರ್ಯಕ್ರಮ ಉದ್ಘಾಟಿಸುವರು. ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ, ಮಾಜಿ ಶಾಸಕ ಎಸ್.ವಿ. ರಾಮಚಂದ್ರ, ದಾವಣಗೆರೆ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೋಗುಂಡಿ ಬಕ್ಕೇಶಪ್ಪ, ಹರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಬಿ.ಸಿ. ಉಮಾಪತಿ, ತಂಜೀಮುಲ್ ಮುಸ್ಲಿಮಿನ್ ಫಂಡ್ ಅಸೋಸಿಯೇಷನ್ ಅಧ್ಯಕ್ಷ ದಾದುಸೇಠ್, ಪಾಲಿಕೆ ಸದಸ್ಯ ಚಮನ್‌ಸಾಬ್, ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ ಎಲ್. ರಾಯ್ಕರ್ ಪ್ರಶಸ್ತಿ ಪ್ರದಾನ ಮಾಡುವರು.ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ನೀಲಿ, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
    ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್, ಪತ್ರಕರ್ತ ಡಾ.ಸಿ. ವರದರಾಜು, ಹೇಮಚಂದ್ರ ಜೈನ್, ಎಸ್.ಜೆ. ಹನುಮಂತರಾಜ್, ಕೆ.ವಿ. ಪ್ರದೀಪ್, ಬಿ. ಅಣ್ಣಪ್ಪ, ಎಸ್. ಸುರೇಶ್‌ಬಾಬು, ಕೊಟ್ರೇಶ್ ಸೋಮನಹಳ್ಳಿ, ಹರಿಹರದ ಬಿ.ಎಂ.ಸಿದ್ದಲಿಂಗಸ್ವಾಮಿ, ಜಗಳೂರಿನ ಡಿ.ಶ್ರೀನಿವಾಸ್, ಹೊನ್ನಾಳಿಯ ಎನ್.ಕೆ. ಆಂಜನೇಯ, ಚನ್ನಗಿರಿಯ ಎಚ್.ವಿ. ನಟರಾಜ್ ಮಾಧ್ಯಮ ಮಾಣಿಕ್ಯ ಪ್ರಶಸ್ತಿ ಹಾಗೂ ವಾರ್ತಾ ಇಲಾಖೆ ನಿವೃತ್ತ ನೌಕರ ಬಿ.ಎಸ್. ಬಸವರಾಜ್ ವಾರ್ತಾ ಮಾಧ್ಯಮ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದರು.
    ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಪ್ರಭಾಕರ್ ಅವರನ್ನು ಆಹ್ವಾನಿಸಿ ಪತ್ರಕರ್ತರಿಗೆ ಕಾರ್ಯಾಗಾರ, ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಮ್ಮೇಳನ, ರಜತ ಮಹೋತ್ಸವ, ಹಿರಿಯ ಪತ್ರಕರ್ತರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮೊದಲಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಜಿಲ್ಲೆಯಲ್ಲಿ ಪತ್ರಿಕಾ ಭವನ ನಿರ್ಮಾಣ ಹಾಗೂ ಖಾಸಗಿಯಾಗಿ ಪತ್ರಕರ್ತರ ಕಾಲನಿ ನಿರ್ಮಿಸುವ ಯೋಜನೆಯಿದೆ ಎಂದು ಹೇಳಿದರು.
    ಸಂಘದ ಪ್ರಧಾನ ಕಾರ್ಯದರ್ಶಿ ಫಕೃದ್ದೀನ್, ಖಜಾಂಚಿ ಎನ್.ವಿ. ಬದರಿನಾಥ್, ರಾಜ್ಯ ಸಮಿತಿ ಸದಸ್ಯ ಕೆ. ಚಂದ್ರಪ್ಪ, ಆರ್.ಎಸ್.ತಿಪ್ಪೇಸ್ವಾಮಿ, ಚನ್ನವೀರಯ್ಯ, ವೇದಮೂರ್ತಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts