More

    ಮಾಧ್ಯಮ ಸಮಾಜದ ಕನ್ನಡಿ

    ಆಳಂದ (ಕಲಬುರಗಿ): ಇಂದಿನ ಸಮಾಜದಲ್ಲಿ ನಡೆಯುತ್ತಿರುವ ವಾಸ್ತವಿಕ ಅಂಶಗಳನ್ನು ಎತ್ತಿ ಹಿಡಿಯುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಮಾಜಿ ಶಾಸಕ ಬಿ.ಆರ್.ಪಾಟೀಲ್ ಹೇಳಿದರು.

    ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾಧ್ಯಮಗಳು ಸಮಾಜದ ಕನ್ನಡಿಯಾಗಿದ್ದು, ಉತ್ತಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುತ್ತಿವೆ. ಪತ್ರಕರ್ತರು ವಸ್ತು ನಿಷ್ಠ ಹಾಗೂ ಪತ್ರಿಕಾ ಧರ್ಮ ಪಾಲಿಸಿ ಸುದ್ದಿಗಳನ್ನು ಬಿತ್ತರಿಸಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ನೀಡಲು ಶ್ರಮಿಸಬೇಕು ಎಂದು ತಿಳಿಸಿದರು.

    ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಮಾತನಾಡಿ, ವಿದ್ಯಾರ್ಥಿಗಳು ಪತ್ರಿಕೋದ್ಯಮದ ಬಗ್ಗೆ ತಿಳಿದುಕೊಳ್ಳಬೇಕು. ಕಲಬುರಗಿ ಶರಣಬಸವ ವಿವಿ ಸೇರಿ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ಕೋರ್ಸ್​ ಆರಂಭಿಸಲಾಗಿದ್ದು, ಅಧ್ಯಯನ ಮಾಡಿ ಜವಾಬ್ದಾರಿಯುತ ಪತ್ರಕರ್ತನಾಗಿ ಹೊರಹೊಮ್ಮಬೇಕು ಎಂದರು.

    ತಹಸೀಲ್ದಾರ್ ಯಲ್ಲಪ್ಪ ಸುಬೇದಾರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೆಶಕ ಶಿವಶರಣಪ್ಪ ಮೂಳೆಗಾಂವ್ ಮಾತನಾಡಿದರು. ಪುರಸಭೆ ಅಧ್ಯಕ್ಷೆ ರಾಜಶ್ರೀ ಖಜೂರಿ ಉದ್ಘಾಟಿಸಿದರು.

    ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ್, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಶಿವರಂಜನ್ ಸತ್ಯಂಪೇಟೆ, ತಾಲೂಕು ಅಧ್ಯಕ್ಷ ತಯ್ಯಬ್ ಅಲಿ ಜರದೀ, ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗಮಡಿ, ಪ್ರಮುಖರಾದ ಭರತರಾಜ ಸಾವಳಗಿ, ವಿಲಾಸರಾಜ ಪ್ರಸನ್ನ, ನಾಗಮೂರ್ತಿ ಶೀಲವಂತ, ಶಂಕರಗೌಡ, ಮೋನಮ್ಮ ಸುತಾರ್, ಜಾಫರ್ ಅನ್ಸಾರಿ, ಡಿ.ಬಿ.ಪಾಟೀಲ್, ಬಸವರಾಜ ಕಾಳೆ, ಈರಣ್ಣ ಮೂಲಿಮನಿ, ಬಾಸು ಚವ್ಹಾಣ್, ತಿರುಮಲೇಶ, ಚಂದ್ರಶೇಖರ ಜಂಗಲೆ ಇತರರಿದ್ದರು. ಶಿವಲಿಂಗ ತೇಲ್ಕರ್ ಸ್ವಾಗತಿಸಿದರು. ಸಂಜಯ ಪಾಟೀಲ್ ನಿರೂಪಣೆ ಮಾಡಿದರು. ರಾಜಕುಮಾರ ಹಿರೇಮಠ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts