More

    ಮಾನವೀಯ ಮೌಲ್ಯ ನಾಶ

    ಗೋಹಳ್ಳಿ(ಹೊಳೆನರಸೀಪುರ): ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಮತ್ತು ನಾಗರಿಕತೆ ಬೆಳೆದಿದೆ. ಆದರೆ ಮಾನವೀಯ ಮೌಲ್ಯಗಳು ನಾಶವಾಗುತ್ತಿದೆ ಎಂದು ಶಾಸಕ ಎ.ಟಿ. ರಾಮಸ್ವಾಮಿ ಹೇಳಿದರು.
    ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಗೋಹಳ್ಳಿಯಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಅಂಬೇಡ್ಕರ್ ಭವನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
    ಜನರ ಜತೆಯಲ್ಲೇ ಇದ್ದು, ಅವರ ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವವರ ಸಂಖ್ಯೆ ಕಡಿಮೆ ಆಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಬಂದು ಬಣ್ಣ ಬಣ್ಣದ ಮಾತುಗಳನ್ನಾಡಿ ಆಸೆ ಆಮಿಷಗಳನ್ನೊಡ್ಡಿ ಮತ ಪಡೆಯುವ ರಾಜಕಾರಣಿಗಳ ಬಗ್ಗೆ ಎಚ್ಚರ ಇರಲಿ ಎಂದರು.
    ಚುನಾವಣೆ ಸಮೀಸುತ್ತಿರುವ ಈ ದಿನಗಳಲ್ಲಿ ರಾಜಕಾರಣಿಗಳು ಯಾವ ಯಾವ ಕೆಲಸ ಮಾಡುತ್ತಿದ್ದಾರೆ, ಹೆಚ್ಚಾಗಿ ಎಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದು ನಿಮಗೆಲ್ಲ ಗೊತ್ತೇ ಇದೆ. ನಾನು ಬಡಜನರಿಗೆ ಸಿಗಬೇಕಾದ ಭೂಮಿ ಕೊಡಿಸಲು ಬಗರ್ ಹುಕುಂ ಸಾಗುವಳಿ ಮಾಡುವವರ ಸಭೆ ಕರೆದಿದ್ದೇನೆ. ಜನರ ಸೇವೆಗಾಗಿ ನಾನು ರಾಜಕಾರಣ ಮಾಡುತ್ತಿರುವವನು. ಸ್ವಾರ್ಥಕ್ಕಾಗಿ, ಐಶಾರಾಮಿ ಜೀವನ ನಡೆಸುವುದಕ್ಕಲ್ಲ ಎಂದರು.
    ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ದೇವರಾಜ್ ಮಾತನಾಡಿ, ಶಾಸಕರ ಆಶಯದಂತೆ ಸಮುದಾಯ ಭವನದಲ್ಲಿ ಗ್ರಂಥಾಲಯ ಸ್ಥಾಪಿಸಿದ್ದೇವೆ. ಗ್ರಾಮದ ಮಕ್ಕಳಿಗೆ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತೇವೆ ಎಂದರು.
    ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ನೀಡಿದ ದಾನಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪುರುಷೋತ್ತಮ್, ತಾಲೂಕು ಸಹಾಯಕ ನಿರ್ದೇಶಕ ಕೌಸರ್ ಅಹಮದ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಸೋಮಶೇಖರ್, ಟಿ.ಆರ್. ವಿಜಯಕುಮಾರ್, ಉಪನ್ಯಾಸಕ ಎನ್.ಆರ್. ಶಿವರಾಂ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್, ಅಭಿವೃದ್ಧಿ ಅಧಿಕಾರಿ ಸವಿತಾ, ಕಲಾವಿದ ಚನ್ನರಾಯಿ, ನಳಿನಾಕ್ಷಿ ಇತರರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts