More

    ಮಾನವ ಕಳ್ಳ ಸಾಗಣೆ ತಡೆಗೆ ಕೈಜೋಡಿಸಿ

    ಬೆಳಗಾವಿ: ಮಾನವ ಕಳ್ಳ ಸಾಗಣೆ ತಡೆಗಟ್ಟಲು ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮಾಳಮಾರುತಿ ಆರಕ್ಷಕ ಠಾಣೆಯ ವೃತ್ತ ಆರಕ್ಷಕ ನಿರೀಕ್ಷಕಿ ಶ್ರೀದೇವಿ ಪಾಟೀಲ ತಿಳಿಸಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಟಕ ಮಹಾವಿದ್ಯಾಲಯದಲ್ಲಿ ಈಚೆಗೆ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಟಕ ಸಂಯುಕ್ತಾಶ್ರಯದಲ್ಲಿ ಮಾನವ ಕಳ್ಳ ಸಾಗಣೆ ತಡೆ ದಿನದ ಅಂಗವಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಮತ್ತು ಜಾಗೃತಿ ಜಾಥಾದಲ್ಲಿ ಮಾತನಾಡಿದರು.

    ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲವಿದ್ದವರಿಗೆ ಹಣ ಮತ್ತು ಇನ್ನಿತರ ಆಮಿಷಗಳನ್ನು, ತೋರಿಸಿ ಅವರನ್ನು ಮಾನವ ಕಳ್ಳ ಸಾಗಣೆ ಜಾಲಕ್ಕೆ ಸೇರ್ಪಡೆ ಮಾಡುತ್ತಾರೆ. ಇಂತಹ ಕೃತ್ಯಗಳನ್ನು ನಿಯಂತ್ರಿಸಲು ಪೊಲೀಸರು ನಿರಂತರ ಶ್ರಮಿಸುತ್ತಿದ್ದಾರೆ. ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಪೊಲೀಸರೊಂದಿಗೆ ಕೈಜೋಡಿಸಿದರೆ ಮಾತ್ರ ಮಾನವ ಕಳ್ಳ ಸಾಗಣೆ ನಿಮೂರ್ಲನೆ ಮಾಡಲು ಸಾಧ್ಯ ಎಂದರು.

    ಪ್ರಾಚಾರ್ಯ ಡಾ.ಶಂಕರ ತೇರದಾಳ ಮಾತನಾಡಿ, ಮಾನವ ಕಳ್ಳ ಸಾಗಣೆ ನಾಗರಿಕ ಸಮಾಜಕ್ಕೆ ಅಂಟಿದ ಕಳಂಕ. ಮನುಷ್ಯರೇ ಮನುಷ್ಯರನ್ನು ಮಾರಾಟ ಮಾಡುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಈ ಕುರಿತು ವಿದ್ಯಾರ್ಥಿಗಳಲ್ಲಿ, ಸಮಾಜದಲ್ಲಿ ಅರಿವು ಮೂಡಿಸಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಬಸವರಾಜು ಎ.ಎಂ.ಮಾತನಾಡಿ, ಮಾನವ ಕಳ್ಳ ಸಾಗಣೆ ಹಲವಾರು ಆಯಾಮಗಳಲ್ಲಿ ನಡೆಯುತ್ತವೆ.

    ಚಿಕ್ಕ ಮಕ್ಕಳನ್ನು ಅಪಹರಿಸಿ ಭಿಾಟನೆಗೆ ತಳ್ಳುವುದು, ಶ್ರೀಮಂತರ ಅಂಗಾಂಗ ಕಸಿಮಾಡಿಕೊಳ್ಳಲು ಬಡವರಿಗೆ ಹಣದ ಆಮಿಷ ತೋರಿಸಿ ಅವರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. ಆರಕ್ಷಕ ಉಪ ನಿರೀಕ್ಷಕ ಹೊನ್ನಪ್ಪ ಎಚ್​.ತಳವಾರ, ಜಿಲ್ಲಾ ಮಕ್ಕಳ ರಕ್ಷಣಾ ಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚಂದ್ರಶೇಖರ ಸುಖಸಾರೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕ್ಷ$್ಮಣ ಭಜಂತ್ರಿ ,ಡಾ. ಮಲ್ಲೇಶ್​ ದೊಡ್ಡಲಕ್ಕಣ್ಣವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts