More

    ಮಾನವ ಕುಲಕ್ಕೆ ರೇಣುಕರ ತತ್ತ್ವ ಅಗತ್ಯ

    ಬೆಳಗಾವಿ: ಜಗದ್ಗುರು ರೇಣುಕಾಚಾರ್ಯರು ಮಾನವ ಜನಾಂಗಕ್ಕೆ ಮಾನವೀಯತೆಯ ಸಂದೇಶ ಸಾರಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ರೇಣುಕರ ತತ್ತ್ವವನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಶಾಂತಿ ಸಮಾಧಾನ ಸಿಗಲು ಸಾಧ್ಯ ಎಂದು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಹೇಳಿದರು.

    ನಗರದಲ್ಲಿನ ಹುಕ್ಕೇರಿ ಹಿರೇಮಠದ ಪ್ರಾಂಗಣದಲ್ಲಿ ಭಾನುವಾರ ಜಗದ್ಗುರು ರೇಣುಕಾಚಾರ್ಯ ಜಯಂತಿಯ 5ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹುಕ್ಕೇರಿ ಹಿರೇಮಠ ನಾಡು-ನುಡಿ ಮತ್ತು ಧರ್ಮವನ್ನು ಬಿತ್ತುವ ಮಠವಾಗಿದ್ದು, ರೇಣುಕಾಚಾರ್ಯರ ಜಯಂತಿಯನ್ನು ಇಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು. ರಾಜ್ಯ ಸರ್ಕಾರದಿಂದ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲು ಆದೇಶ ಹೊರಡಿಸಿದ್ದು, ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮಾತನಾಡಿ, ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲು ಆದೇಶ ಹೊರಡಿಸಿದೆ. ಅನೇಕ ಭಾಗಗಳಲ್ಲಿ ಭಾನುವಾರ ಸಾಂಕೇತಿಕವಾಗಿ ಆಚರಿಸಿದ್ದೇವೆ. ಮಾ.16ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅದ್ದೂರಿಯಾಗಿ ಆಚರಿಸಲು ಸನ್ನದ್ದರಾಗಿದ್ದೇವೆ ಎಂದರು.

    ಸಾನ್ನಿಧ್ಯ ವಹಿಸಿದ್ದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಈಗಾಗಲೇ ಜಿಲ್ಲೆಯ ಅನೇಕ ಕಡೆ ಆಚರಿಸಿದ್ದು, ಬೆಳಗಾವಿ ನಗರದಲ್ಲಿ ವೈಶಿಷ್ಟ್ಯ ಪೂರ್ಣವಾಗಿ ಆಚರಿಸಿ ಆಶೀರ್ವಾದ ಪಡೆಯಲು ಸಂತಸವಾಗುತ್ತಿದೆ ಎಂದರು. ಕಾರ್ಯಕ್ರಮವನ್ನು ಶಾಸಕ ಅನಿಲ ಬೆನಕೆ ಉದ್ಘಾಟಿಸಿದರು. ರಂಗಾಯಣದ ನಿರ್ದೇಶಕ ರಮೇಶ ಪರವಿನಾಯ್ಕರ ಹಾಗೂ ಮುಕ್ತಾರಹುಸೇನ್ ಪಠಾಣ ಕುಟುಂಬದವರನ್ನು ಸನ್ಮಾನಿಸಲಾಯಿತು. ವಿರೂಪಾಕ್ಷಯ್ಯ ನೀರಲಗಿಮಠ, ವಿಜಯ ಶಾಸ್ತ್ರೀ, ಚಂದ್ರಶೇಖರ ಸವಡಿ ಸೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts