More

    ಮಾನವ ಹಕ್ಕುಗಳಿಗೆ ಧಕ್ಕೆಯಾದರೆ ಅರಾಜಕತೆ

    ಚಿತ್ರದುರ್ಗ: ಮಾನವ ಹಕ್ಕುಗಳು, ನಾಗರಿಕರ ಘನತೆಯ ಜೀವನಕ್ಕೆ ಸಹಕಾರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.
    ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿ ವೇಕಾನಂದರ 161ನೇ ಜನ್ಮ ದಿನ-ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಚಿತ್ರದುರ್ಗ ತಾಲೂಕು ಜಿ.ಆರ್.ಹಳ್ಳಿ ದಾವಣಗೆರೆ ವಿವಿ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಯುವ ಜನರಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮ ಉ ದ್ಘಾಟಿಸಿ,ಮಾನವ ಹಕ್ಕುಗಳ ಕುರಿತು ಅವರು ಉಪನ್ಯಾಸ ನೀಡಿದರು.
    ನಮ್ಮ ಅಸ್ತಿತ್ವಕ್ಕಾಗಿ ಇರಬೇಕಾದ ಮಾನವ ಹಕ್ಕುಗಳು,ಜಾಗತಿಕವಾಗಿ ಎಲ್ಲರಿಗೂ ಯಾವುದೇ ಲಿಂಗಭೇದವಿಲ್ಲದೇ ಸಮಾನಾಗಿವೆ. ಈ ಹಕ್ಕುಗಳ ಇಲ್ಲದಿದ್ದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿಯಾಗುವುದರ ಜತೆಗೆ ಮನುಷ್ಯನ ಅಸ್ತಿತ್ವವೇ ಕಳೆದುಹೋಗಲಿದೆ. ಹಾಗಾಗಿ ಮಾನವ ಹಕ್ಕುಗಳ ರಕ್ಷ ಣೆಗಾಗಿ ಜಿಲ್ಲಾ,ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಮಾನವ ಹಕ್ಕುಗಳ ಆಯೋಗಗಳು ಕೆಲಸ ಮಾಡುತ್ತಿವೆ. ಹಕ್ಕುಗಳ ಉಲ್ಲಂಘನೆ ಮಾಡಿದ ವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ ಎಂದರು.
    ಜಿಲ್ಲಾ ಯುವಜನ ಅಧಿಕಾರಿ ಎನ್.ಸುಹಾಸ್ ಮಾತನಾಡಿ, ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತಿದೆ. ಯುವಜನರು ದೇಶದ ಪ್ರಗತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಯುವ ದಿನಾಚರಣೆ ಆಚರಿಸಲಾಗುತ್ತಿ ದೆ. ಭಾರತ ಹೆಚ್ಚಿನ ಯುವ ಜನರನ್ನು ಹೊಂದಿರುವ ದೇಶವಾಗಿದ್ದು,ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ವಿವೇಕಾನಂದರ ಸಂದೇಶಗಳನ್ನು ಯುವಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕೆಂದರು.
    ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ,ಯುವ ಜನರು,ಸ್ವಾಮಿ ವಿವೇಕಾನಂದರ ಆದರ್ಶಗಳೊಂದಿಗೆ ಅವರು ಸಾಗಿದ ದಾರಿ ಯಲ್ಲಿ ಹೆಜ್ಜೆ ಹಾಕಬೇಕೆಂದರು. ಅಧ್ಯಯನ ಕೇಂದ್ರ ಕನ್ನಡ ವಿಭಾಗದ ವಿಷಯ ಸಂಯೋಜಕ ಡಾ.ಎಚ್.ಜಿ.ವಿಜಯಕುಮಾರ್ ಮಾತನಾಡಿ, ಪ್ರತಿಯೊಂದು ರಾಷ್ಟ್ರದ ಅಭಿವೃದ್ಧಿಯಲ್ಲಿ ಯುವ ಸಮುದಾಯದ ಪಾತ್ರ ಮಹತ್ವದ್ದಾಗಿದೆ ಎಂದರು.
    ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್‌ಕುಮಾರ್,ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್,ಅಧ್ಯಯನ ಕೇಂದ್ರದ ಅರ್ಥಶಾಸ್ತ್ರ ಅಧ್ಯ ಯನ ವಿಭಾಗದ ಸಂಯೋಜಕ ಡಿ.ಎಚ್.ಗಿರೀಶ,ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಯೋಜಕಿ ನಿವೇದಿತಾ ಮತ್ತಿತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts