More

    ಮಾರಿಕಾಂಬೆಗೆ ವೈಭವೋಪೇತ ದೇವಾಲಯ

    ಶಿರಸಿ: ರಾಜ್ಯದ ಧಾರ್ವಿುಕ ಕೇಂದ್ರವಾಗಿ ಮಾರ್ಪಡುತ್ತಿರುವ ನಗರದಲ್ಲಿ ಮಾರಿಕಾಂಬಾದೇವಿಯ ವೈಭವೋಪೇತ ದೇವಾಲಯ ನಿರ್ವಿುಸಲು ಅನುಮತಿ ನೀಡುವಂತೆ ಮುಖ್ಯಮಂತ್ರಿಗೆ ಒತ್ತಾಯಿಸಲಾಗುವುದು ಎಂದು ಕಾರ್ವಿುಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

    ಮಾರಿಕಾಂಬಾದೇವಿಗೆ ಶುಕ್ರವಾರ ಪೂಜೆ ಸಲ್ಲಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಾರಿಕಾಂಬಾ ದೇವಾಲಯ ಅಭಿವೃದ್ಧಿ ಸಂಬಂಧ ಮೊದಲು ಮುಜರಾಯಿ ಸಚಿವರೊಂದಿಗೆ ರ್ಚಚಿಸಿ ನಂತರ ಸಿಎಂ ಬಳಿ ಪ್ರಸ್ತಾಪಿಸಲಾಗುವುದು ಎಂದರು.

    ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡುವಂತೆ ಮುಖ್ಯಮಂತ್ರಿಗೆ ಒತ್ತಾಯಿಸಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಲಾಗಿದೆ. ಆದರೆ, ಉತ್ತರ ಕನ್ನಡದಲ್ಲಿ ಕಳೆದ ಬಾರಿ ಮೂವರು, ಪ್ರಸಕ್ತ ವರ್ಷ ಒಬ್ಬ ಸಾವಿಗೀಡಾಗಿದ್ದಾನೆ. ಆದರೆ, ಪರಿಹಾರ ನೀಡಿಲ್ಲ ಎಂದರು. ಕಾಯಿಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

    ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಶಿರಸಿ ತಾಲೂಕಿನ ಗ್ರಾಮಗಳನ್ನು ಸೇರಿಸದಂತೆ ವಿಧಾನಸಭಾಧ್ಯಕ್ಷರು ಮುಖ್ಯಮಂತ್ರಿ ಬಳಿ ರ್ಚಚಿಸಿದ್ದಾರೆ. ಜತೆಗೆ ಸಂಬಂಧಪಟ್ಟ ಸಚಿವರಿಗೂ ಪ್ರಸ್ತಾವ ಕೈಬಿಡುವಂತೆ ಸೂಚಿಸಿದ್ದಾರೆ. ಹಾಗಾಗಿ ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದರು.

    ಸಿಎಂ ಯಡಿಯೂರಪ್ಪ ಅವರು ಕೃಷಿ ಕ್ಷೇತ್ರಕ್ಕೆ ಸಹಕಾರಿಯಾದ ಬಜೆಟ್ ಮಂಡಿಸಿದ್ದಾರೆ. ಜಿಲ್ಲೆಯಲ್ಲಿ ಮೀನುಗಾರರ ಅಭಿವೃದ್ಧಿ, ಕೈಗಾರಿಕಾ ವಸಾಹತು, ಆಸ್ಪತ್ರೆ ಮೇಲ್ದರ್ಜೆ, ಬಂದರು ವಿಸ್ತರಣೆ ಸೇರಿ ಹಲವು ಕೊಡುಗೆ ನೀಡಿದ್ದಾರೆ ಎಂದರು. ಶಾಸಕರಾದ ರೂಪಾಲಿ ನಾಯ್ಕ, ಕಳಕಪ್ಪ ಬಂಡಿ, ಮಾರಿಕಾಂಬಾ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟೇಶ ನಾಯ್ಕ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts