More

    ಮಾರ್ಚ್​ನಲ್ಲಿ ಜಿಎಸ್​ಟಿ ಸರಳೀಕರಣ

    ಹುಬ್ಬಳ್ಳಿ: ವ್ಯಾಪಾರಿಗಳು ಹಾಗೂ ಉದ್ಯಮಿಗಳಿಗೆ ಮತ್ತಷ್ಟು ಅನುಕೂಲ ಒದಗಿಸುವ ಉದ್ದೇಶದಿಂದ ಮಾರ್ಚ್​ನಲ್ಲಿ ಜಿಎಸ್​ಟಿಯನ್ನು ಮತ್ತಷ್ಟು ಸರಳೀಕರಣಗೊಳಿಸಲಾಗುತ್ತಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಅಪರ ಆಯುಕ್ತ ಡಾ. ಬಿ.ವಿ. ಮುರಳಿಕೃಷ್ಣ ಹೇಳಿದರು.

    ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಸೋಮವಾರ ಆಯೋಜಿಸಿದ್ದ ಜಿಎಸ್​ಟಿ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ನಿತ್ಯದ ವ್ಯಾಪಾರ, ಉದ್ದಿಮೆಗಳಲ್ಲಿ ಹಲವಾರು ಸಮಸ್ಯೆಗಳು ಇವೆ. ಈಗಾಗಲೇ ಬಹುತೇಕ ಸಮಸ್ಯೆಗಳು ನಿವಾರಣೆಯಾಗಿದ್ದು, ಇನ್ನುಳಿದ ಸಮಸ್ಯೆಗಳನ್ನು ಸಹ ಶೀಘ್ರ ನಿವಾರಿಸಲಾಗುವುದು ಎಂದು ತಿಳಿಸಿದರು.

    ಜಿಎಸ್​ಟಿ ತಂತ್ರಜ್ಞಾನ ಆಧಾರಿತ ತೆರಿಗೆ ಪದ್ಧತಿ. ಇದರಲ್ಲಿ ಯಾವುದೇ ಅಧಿಕಾರಿಗಳಾಗಲಿ ಅಥವಾ ಉದ್ಯಮಿಗಳಾಗಲಿ ಮಾರ್ಪಾಡು ಮಾಡಲು ಸಾಧ್ಯವಿಲ್ಲ. ಜಿಎಸ್​ಟಿಯಲ್ಲಿ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಉದ್ಯಮಿಗಳು ಆತಂಕಕ್ಕೊಳಗಾಗಬೇಕಿಲ್ಲ ಎಂದು ಹೇಳಿದರು.

    50 ಸಾವಿರ ರೂ.ಗಳಿಗಿಂತ ಹೆಚ್ಚು ಮೌಲ್ಯದ ವಸ್ತುಗಳಿಗೆ ಇಲೆಕ್ಟ್ರಾನಿಕ್ ಪೇ ಬಿಲ್ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಇ ಬಿಲ್ ಜೊತೆಗೆ ಇಲೆಕ್ಟ್ರಾನಿಕ್ ಇನ್​ವೈಸ್​ಅನ್ನೂ ರಚಿಸಬೇಕು. ವ್ಯಾಪಾರಿಗಳು ಈ ಪದ್ಧತಿಗೆ ಸಹಕರಿಸುವ ವಿಶ್ವಾಸವಿದೆ. ಈ ಪದ್ಧತಿಯಿಂದ ದುರುಪಯೋಗದ ಪ್ರಕರಣಗಳನ್ನು ತಡೆಯಬಹುದಾಗಿದೆ ಎಂದು ತಿಳಿಸಿದರು.

    ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಲಕ್ಷ್ಮಣ ನಾಯಕ, ಸಂಸ್ಥೆಯ ಅಧ್ಯಕ್ಷ ಮಹೇಂದ್ರ ಲದ್ದಡ, ಮಾಜಿ ಅಧ್ಯಕ್ಷ ವಸಂತ ಲದ್ವಾ, ವಿನಯ ಜವಳಿ, ಸಿದ್ದೇಶ್ವರ ಕಮ್ಮಾರ, ಅಶೋಕ ಗಡಾದ, ವ್ಯಾಪಾರಿಗಳು, ಉದ್ದಿಮೆದಾರರು, ತೆರಿಗೆ ಸಲಹೆಗಾರರು, ಲೆಕ್ಕ ಪರಿಶೋಧಕರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts