More

    ಮಾರ್ಚ್ ಅಂತ್ಯದ ವೇಳೆಗೆ ಅನುದಾನ ಸದ್ಬಳಕೆಯಾಗಲಿ


    ಯಾದಗಿರಿ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸಕರ್ಾರದ ವಿವಿಧ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗಾಗಿ ಸಚಿವರು ಜಿಲ್ಲೆಗಳತ್ತ ಮುಖ ಮಾಡುತ್ತಿದ್ದು, ಇದರ ಮುಂದುವರೆದ ಭಾಗವಾಗಿ ಸೋಮವಾರ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವರ ನಡೆ ಹಾಸ್ಟೆಲ್ ಕಡೆ ಕಾರ್ಯಕ್ರಮದ ಅಂಗವಾಗಿ ಯಾದಗಿರಿ ವಿಧಾನಸಭಾ ಕ್ಷೇತ್ರದ ಕೆಲ ಗ್ರಾಮಗಳಲ್ಲಿ ಪರ್ಯಟನೆ ನಡೆಸಿದರು.

    ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳ ಜಮೀನಿನಲ್ಲಿ ಕೊಳವೆ ಭಾವಿ ಕೊರೆಸುವುದು, ಹಾಗೂ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಸೇರಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ರಾತ್ರಿ ವಡಿಗೇರಾ ತಾಲೂಕಿನ ಬೆಂಡೆಬೆಂಬಳಿ ಮೊರಾಜರ್ಿ ಶಾಲೆಯಲ್ಲಿ ವಾಸ್ತವ್ಯ ಹೂಡಿದರು.

    ಮಧ್ಯಾಹ್ನ ಶಾಲೆಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಕನರ್ಾಟಕ ವಸತಿ ಶಿಕ್ಷಣ ಸಂಸ್ಥೆಗಳ ಮತ್ತು ವಿವಿಧ ಅಭಿವೃದ್ಧಿ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಾಭಿವೃದ್ಧಿಗೆ ಸರ್ಕಾರ ಬಜೆಟ್ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಅಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದರು.

    ಸರ್ಕಾರ

    ದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಅನುಕೂಲವಾಗುವ ರೀತಿಯಲ್ಲಿ ಜಿಲ್ಲೆಯ ಪ.ಜಾತಿ, ಪಂಗಡದವರ ನಿಖರ ಮಾಹಿತಿ ಸಂಗ್ರಹಿಸಬೇಕು.
    ಭೂ ಒಡೆತನ, ನಿವೇಶನ, ವಾಸಿಸುವ ಮನೆ, ವಿದ್ಯುಚ್ಛಕ್ತಿ ಸೌಲಭ್ಯ, ಸೇರಿದಂತೆ ಅವರ ಆಥರ್ಿಕ ಮಾಹಿತಿಗಳನ್ನು ಸಂಗ್ರಹಿಸಿದ್ದಲ್ಲಿ ಅವರುಗಳ ಅವಶ್ಯಕತೆಗನುಗುಣವಾಗಿ, ಈ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯ ತಲುಪಿಸಲು ಸಹಕಾರವಾಗುತ್ತದೆ. ಈ ಕಾರ್ಯವನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಕಾರಿಗಳು ಮಾಡಬೇಕು. ಜಿಲ್ಲೆಯ ಎಲ್ಲ ಇಲಾಖೆ ಅಕಾರಿಗಳಿಂದ ಸಕರ್ಾರಿ ನಿಗಪಡಿಸಿದ ಗುರಿ, ಇಲ್ಲಿಯವರೆಗೆ ಸಾಸಿದ ಭೌತಿಕ ಮತ್ತು ಆಥರ್ಿಕ

    ಸಾಧನೆಯ ಬಗ್ಗೆ ಮಾಹಿತಿ ಪಡೆದ ಸಚಿವರು, ಎಲ್ಲ ಇಲಾಖೆಗಳು ಮಾರ್ಚ್ಅಂತ್ಯದೊಳಗೆ ಸಂಪೂರ್ಣ ಗುರಿ ಸಾಸಬೇಕು ವಂತೆ ನಿರ್ದೇಶನ ನೀಡಿದರು.
    ಸಭೆಯಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಎಂಎಲ್ಸಿ ಬಿ.ಜಿ. ಪಾಟೀಲ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೇಂದ್ರನಾಥ ನಾದ್, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts