More

    ಮಾರ್ಚ್ 22ರಂದು ದಲಿತ ಮುಖಂಡರ ಸಭೆ

    ಹಾಸನ: ಜಿಲ್ಲೆಯಲ್ಲಿ ವಂಶ ರಾಜಕಾರಣ ಹಾಗೂ ಕೋಮುವಾದಿ ರಾಜಕಾರಣ ನಿಯಂತ್ರಿಸುವ ಸಲುವಾಗಿ ಮಾರ್ಚ್ 22ರ ಶುಕ್ರವಾರ ಬೆಳಿಗ್ಗೆ 10:30ಕ್ಕೆ ನಗರದ ಕರಾವಳಿ ಸಭಾಂಗಣದಲ್ಲಿ ದಲಿತ ಮುಖಂಡರ ಸಭೆ ಕರೆಯಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಸೋಮಶೇಖರ್ ತಿಳಿಸಿದರು.
    ಈಗಾಗಲೇ ಲೋಕಸಭಾ ಚುನಾವಣೆ ದಿನಾಂಕ ನಿಗದಿಯಾಗಿದೆ. ಇಂತಹ ಸಮಯದಲ್ಲಿ ಸಮಾಜದಲ್ಲಿ ಉತ್ತಮ ಕೆಲಸ ಮಾಡುವ ಒಳ್ಳೆಯ ಅಭ್ಯಥಿಯನ್ನು ಗೆಲ್ಲಿಸುವ ಅನಿವಾರ್ಯತೆ ಇದೆ. ಜಿಲ್ಲೆ ಒಳಗೆ ವಂಶ ಪಾರಂಪರ್ಯ ರಾಜಕಾರಣ ಹಾಗೂ ಕೋಮುವಾದಿ ಶಕ್ತಿಗಳನ್ನು ಹಿಮ್ಮೆಟ್ಟಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳುವ ಅನಿವಾರ್ಯತೆ ಇದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಬಿಜೆಪಿ ಮುಖಂಡ ಅನಂತ ಕುಮಾರ್ ಹೆಗಡೆ ಬಹಿರಂಗವಾಗಿ ಹೇಳಿಕೆ ನೀಡುತ್ತಾರೆ. ಇಂತಹ ಕೋಮುವಾದಿಗಳ ವಿರುದ್ಧವಾಗಿ ದಲಿತ ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಅವರಿಗೆ ಅಧಿಕಾರ ಕೊಡಲೇಬಾರದು ಎಂದು ಚರ್ಚಿಸಲು ಈ ಸಭೆ ನಡೆಸಲಾಗುತ್ತಿದೆ ಎಂದು ಹೇಳಿದರು.
    ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಪ್ರೀತಿ ಹೊಂದಿರುವ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಭಾಗವಹಿಸಿ ಸಭೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
    ಸುದ್ದಿಗೋಷ್ಠಿಯಲ್ಲಿ ದಲಿತ ಮುಖಂಡರಾದ ಎಚ್.ಕೆ. ಸಂದೇಶ್, ರಾಜಶೇಖರ್, ಕೆ.ಎನ್. ಮಲ್ಲಪ್ಪ, ಜಿ.ಓ. ಮಹಾಂತಪ್ಪ, ವಿಜಯ್ ಕುಮಾರ್ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts