More

    ಮಾಸ್ಕ್ ಧರಿಸಿ ಇಲ್ಲವೇ ದಂಡ ಕಟ್ಟಿ

    ಧಾರವಾಡ: ಕರೊನಾ ವೈರಾಣು ನಿಯಂತ್ರಣಕ್ಕೆ ಮಾಸ್ಕ್ ಬಳಕೆ ಕಡ್ಡಾಯ. ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಪಾಲಿಸುವುದು ಪ್ರತಿಯೊ ಬ್ಬರ ಕರ್ತವ್ಯ. ಮಾಸ್ಕ್ ಬಳಕೆ ಮಾಡದವರಿಂದ ಜಿಲ್ಲೆಯಲ್ಲಿ ಈವರೆಗೆ 30 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ದಂಡ ವಿಧಿಸುವ ಕಾರ್ಯವನ್ನು ಚುರುಕುಗೊಳಿಸಲು 25ರಿಂದ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ ಹೇಳಿದರು.

    ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ಕರೆಯಲಾಗಿದ್ದ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾರುಕಟ್ಟೆ, ಹೋಟೆಲ್, ಪಾನ್​ಶಾಪ್, ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಜನರು ಮಾಸ್ಕ್ ಧರಿಸುವುದು ಕಡ್ಡಾಯ. ಈ ನಿಯಮ ಉಲ್ಲಂಘಿಸಿದರೆ ನಗರ ಪ್ರದೇಶಗಳಲ್ಲಿ 200 ರೂ. ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲು ಸರ್ಕಾರ ಸೂಚಿಸಿದೆ. ಪೊಲೀಸ್, ಮಹಾನಗರ ಪಾಲಿಕೆ, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ಕಂದಾಯ, ಇತರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡಗಳು ಹು-ಧಾ ಅವಳಿ ನಗರ, ಎಲ್ಲ ತಾಲೂಕು ಕೇಂದ್ರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ಆಕರಿಸಲಿವೆ. ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ದಂಡ ಶುಲ್ಕ ರಸೀದಿಗಳ ಪುಸ್ತಕಗಳನ್ನು ಒದಗಿಸಬೇಕು ಎಂದು ಸೂಚಿಸಿದರು.

    ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಚಿಕಿತ್ಸೆಗೆ ಅಗತ್ಯ ಎಲ್ಲ ಕ್ರಮಗಳನ್ನು ಪಾಲಿಸಲಾಗುತ್ತಿದೆ. ಆಕ್ಸಿಜನ್ ಪೂರೈಕೆ, ವೆಂಟಿಲೇಟರ್​ಗಳ ವ್ಯವಸ್ಥೆ ಬಗ್ಗೆ ಸರ್ಕಾರದ ನಿರ್ದೇಶನಗಳನ್ನು ಅನುಸರಿಸಲಾಗುತ್ತಿದೆ. ಬೇರೆ ಜಿಲ್ಲೆಯ ಸೋಂಕಿತರು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಅವರ ವಿಳಾಸ, ತಾಲೂಕು, ಜಿಲ್ಲೆಯ ಮಾಹಿತಿಯನ್ನು ಎಸ್​ಆರ್​ಎಫ್ ಗುರುತಿನ ಸಂಖ್ಯೆ ಸೃಜಿಸುವ ಸಂದರ್ಭದಲ್ಲಿ ಸರಿಯಾಗಿ ದಾಖಲಿಸಬೇಕು ಎಂದರು.

    ಹು-ಧಾ ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಜಿ.ಪಂ. ಸಿಇಒ ಡಾ. ಬಿ.ಸಿ. ಸತೀಶ, ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ, ಮಹಾನಗರಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಇಬ್ರಾಹಿಂ ಮೈಗೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಕುಮಾರ ಮಾನಕರ, ಡಾ. ಸುಜಾತಾ ಹಸವಿಮಠ, ಡಾ. ಶಶಿ ಪಾಟೀಲ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts