More

    ಮಾಹಿತಿ ಹಕ್ಕು ಆಯೋಗದ ಆಯುಕ್ತ ನೇಮಕಕ್ಕೆ ಆಗ್ರಹ

    ಬೆಳಗಾವಿ: ವಿಭಾಗೀಯ ಮಾಹಿತಿ ಹಕ್ಕು ಆಯೋಗದ ಆಯುಕ್ತರನ್ನು ನೇಮಕ ಮಾಡಬೇಕು. ಬಾಕಿ ಇರುವ ಸಾವಿರಾರು ಪ್ರಕರಣಗಳ ಕಡತಗಳನ್ನು ವಿಲೇವಾರಿ ಮಾಡುವಂತೆ ಒತ್ತಾಯಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಸದಸ್ಯರು ಪ್ರಾದೇಶಿಕ ಆಯುಕ್ತರ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೋಮವಾರ ಮನವಿ ಸಲ್ಲಿಸಿದರು.

    ಮಾಹಿತಿ ಹಕ್ಕು ಆಯೋಗದ ಆಯುಕ್ತರಾಗಿದ್ದ ಬಿ.ವಿ.ಗೀತಾ ಅವರು ರಾಜೀನಾಮೆ ನೀಡಿದ್ದರಿಂದ 1 ವರ್ಷದಿಂದ ಆಯೋಗವು ನಿಷ್ಕ್ರಿಯವಾಗಿದೆ. 12 ಸಾವಿರಕ್ಕೂ ಹೆಚ್ಚು ಕಡತಗಳು ವಿಲೇವಾರಿಯಾಗದೆ ಕಚೇರಿಯಲ್ಲೇ ಕೊಳೆಯುತ್ತಿವೆ. ಇದರಿಂದ ಬೆಳಗಾವಿ ವಿಭಾಗ ವ್ಯಾಪ್ತಿಯ ಉತ್ತರ ಕನ್ನಡ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಧಾರವಾಡ ಸೇರಿ 7 ಜಿಲ್ಲೆಯ ನಾಗರಿಕರ ಹಕ್ಕನ್ನು ಕಸಿದುಕೊಂಡಂತಾಗಿದ್ದು, ರಾಜ್ಯ ಸರ್ಕಾರ ಕರ್ತವ್ಯಲೋಪ ಎಸಗಿದೆ ಎಂದು ಸದಸ್ಯರು ಮನವಿಯಲ್ಲಿ ಆರೋಪಿಸಿದ್ದಾರೆ.

    ರಾಜ್ಯಪಾಲರು ಮಧ್ಯಪ್ರವೇಶಿಸಿ ಬೆಳಗಾವಿ ಮಾಹಿತಿ ಹಕ್ಕು ಆಯೋಗಕ್ಕೆ ಕಾಯ್ದೆ ಮೂಲ ಉದ್ದೇಶ ಈಡೇರಿಸುವ ಅರ್ಹ ಆಯುಕ್ತರನ್ನು ನೇಮಕ ಮಾಡಲು ಸರ್ಕಾರಕ್ಕೆ ಸೂಚಿಸಬೇಕು. ಈ ಮೂಲಕ ನ್ಯಾಯಾಲಯಗಳ ಆದೇಶ ಪಾಲಿಸುವ ಜತೆಗೆ ಸಂವಿಧಾನಬದ್ಧ ಮತ್ತು ಪ್ರಜಾಪ್ರಭುತ್ವದ ಸದುದ್ದೇಶದಿಂದ ಆಡಳಿತ ನಡೆಸುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಒತ್ತಾಯಿಸಿದರು.

    ರಾಜ್ಯಾಧ್ಯಕ್ಷ ಎಚ್.ಜಿ. ರಮೇಶ, ಕಾರ್ಯಾಧ್ಯಕ್ಷ ಚನ್ನಯ್ಯ ವಸ್ತ್ರದ, ಖಜಾಂಚಿ ಮೋಹನ, ಜಿಲ್ಲಾಧ್ಯಕ್ಷ ಹುಸೇನಸಾಬ್ ನದಾಫ್, ನಾಗೇಶ ನಾಯಕ, ವಿರೂಪಾಕ್ಷಗೌಡ ಕುಲಕರ್ಣಿ, ಶಿವಾಜಿ ಸನದಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts