More

    ಮಾ.5ರಂದು ನಮೋ ವೇದಿಕೆ ಅಭ್ಯರ್ಥಿ ಘೋಷಣೆ?; ಪಾಣಿ ರಾಜಪ್ಪ

    ಸೊರಬ: ಆನವಟ್ಟಿಯಲ್ಲಿ ಮಾ.5ರಂದು ನಮೋ ವೇದಿಕೆ ಬೂತ್ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಅಂದೇ ನಮೋ ವೇದಿಕೆಯಿಂದ ಕಣಕ್ಕೆ ಇಳಿಸುವ ಅಭ್ಯರ್ಥಿ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ವೇದಿಕೆ ತಾಲೂಕು ಅಧ್ಯಕ್ಷ ಪಾಣಿ ರಾಜಪ್ಪ ಹೇಳಿದರು.
    ಗುರುವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಶಕ್ತಿಕೇಂದ್ರ ಹಾಗೂ ಬೂತ್ ಮಟ್ಟದ ಸಂಘಟನೆಗೆ ಒತ್ತು ನೀಡಲಾಗುವುದು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕುಮಾರ್ ಬಂಗಾರಪ್ಪ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿಸುವುದೇ ನಮ್ಮ ಉದ್ದೇಶ ಎಂದು ತಿಳಿಸಿದರು.
    ನಮೋ ವೇದಿಕೆಯ ಕಾರ್ಯಕರ್ತರು ಬಿಜೆಪಿ ನಿಷ್ಠರಾಗಿದ್ದು ಯಾರ ಗುಲಾಮರೂ ಅಲ್ಲ, ನಾವು ಪಕ್ಷನಿಷ್ಠರೇ ಹೊರತು ವ್ಯಕ್ತಿನಿಷ್ಠರಲ್ಲ. ಸರ್ಕಾರದ ಯೋಜನೆಗಳ ಮೂಲಕ ಅಭಿವೃದ್ಧಿ ಕಾರ್ಯಗಳು ರಾಜ್ಯದಲ್ಲಿ ನಡೆದಂತೆ ತಾಲೂಕಿನಲ್ಲಿಯೂ ನಡೆಯತ್ತಿವೆ. ಅಭಿವೃದ್ಧಿಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರ ಪಾತ್ರ ಏನಿಲ್ಲ. ಅವರು ಸರ್ವಾಧಿಕಾರಿ ಧೋರಣೆಯಿಂದ ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರವನ್ನು ಪ್ರಶ್ನಿಸುವವರ ಬಗ್ಗೆ ಇಲ್ಲಸಲ್ಲದ ಊಹಾಪೋಹಗಳನ್ನು ಸೃಷ್ಟಿಸಿ ಪಕ್ಷ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
    ಬಿಜೆಪಿ ಹಿರಿಯ ಮುಖಂಡ ಎಚ್.ಎಸ್.ಮಂಜಪ್ಪ ಮಾತನಾಡಿ, ಶಾಸಕ ಕುಮಾರ್ ಬಂಗಾರಪ್ಪ ಅಭಿವೃದ್ಧಿಗೆ ಬಳಸಬೇಕಾದ ಅನುದಾನವನ್ನು ಸೂಕ್ತವಾಗಿ ಬಳಸಿಲ್ಲ. ಸ್ವಜನ ಪಕ್ಷಪಾತ, ವ್ಯಾಪಕ ಭ್ರಷ್ಟಾಚಾರ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಜನರು ಪೇಜ್ ಪ್ರಮುಖರಲ್ಲ. ನಿಜವಾದ 6 ಸಾವಿರ ಪೇಜ್ ಪ್ರಮುಖರು ನಮೋ ವೇದಿಕೆಯಲ್ಲಿದ್ದಾರೆ. ಶಾಸಕರ ವಿರುದ್ಧವಾದ ನಮೋ ವೇದಿಕೆ ನಿಲುವು ಯವುದೇ ಕಾರಣಕ್ಕೂ ಬದಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts