More

    ಮಿನಿ ಲಾರಿ, ಸಾರಿಗೆ ಬಸ್ಡಿಕ್ಕಿ


    ಯಾದಗಿರಿ: ಸಾರಿಗೆ ಬಸ್ಗೆ ಮಿನಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ನ ಮುಂಭಾಗ ಸಂಪೂರ್ಣ ನುಜ್ಜುಗೊಜ್ಜಾದ ಘಟನೆ ತಾಲೂಕಿನ ಹತ್ತಿಕುಣಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಗುರುವಾರ ನಡೆದಿದೆ.

    ಘಟನೆಯಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರಗೆ ದಾಖಲಿಸಲಾಗಿದೆ. ಭತ್ತ ಕತ್ತರಿಸುವ ಬೃಹತ್ ಯಂತ್ರವನ್ನು ಮಿನಿ ಲಾರಿಯಲ್ಲಿ ಯಾದಗಿರಿಗೆ ಸಾಗಿಸಲಾಗುತ್ತಿತ್ತು. ಚಾಲಕ ಅತೀವೇಗದಿಂದ ಬಂದ ಪರಿಣಾಮ ನಿಯಂತ್ರಣ ತಪ್ಪಿ ಬಸ್ಗೆ ಡಿಕ್ಕಿ ಹೊಡೆಡಿದ್ದಾನೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಪ್ರಾಣಾಪಾಯವಾಗಿಲ್ಲ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹತ್ತಿಕುಣಿ ಹೊರ ವಲಯದಲ್ಲಿನ ರಾಜ್ಯ ಹೆದ್ದಾರಿಯ ತಿರುವಿನಲ್ಲಿ ಈ ರೀತಿ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಅಗಲ ಮಾಡಲು ಸಂಬಂಧಿಸಿದ ಅಧಿಕಾರಿಗಳು ಮುಂದಾಗುತ್ತಿಲ್ಲ. ತಿರುವಿನಲ್ಲಿ ಮುಂದೆ ವಾಹನ ಬರುವುದು ಚಾಲಕರಿಗೆ ಗೊತ್ತಾಗುವುದಿಲ್ಲ. ಅಲ್ಲದೆ, ಅಪಘಾತ ವಲಯ ಎಂಬ ಫಲಕ ಸಹ ಅಳವಡಿಸಲು ಲೋಕೊಪಯೋಗಿ ಇಲಾಖೆ ಅಧಿಕಾರಿಗಳು ಅಸಡ್ಡೆತನ ಪ್ರದಶರ್ಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದಲ್ಲದೆ ರಸ್ತೆ ಸಂಪೂರ್ಣ ಹಾಳಾಗಿದ್ದು ರಿಪೇರಿ ಮಾಡಿಸಲು ಟೆಂಡರ್ ಕರೆದರೂ ಕಾಮಗಾರಿ ಆರಂಭಗೊಂಡಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts