More

    ಮೀನುಗಾರರ ಹಿತಕಾಯಲು ಬದ್ಧ

    ಯಲ್ಲಾಪುರ: ಸಾಂಪ್ರದಾಯಿಕ ಮೀನುಗಾರಿಕೆಗೆ ಹಾಗೂ ವಾಸ್ತವ್ಯ ಇರುವ ಸ್ಥಳೀಯ ನಿವಾಸಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಬಂದರನ್ನು ನಿರ್ಮಾಣ ಮಾಡುವುದಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ವಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಭರವಸೆ ನೀಡಿದರು.

    ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದಲ್ಲಿ ಹೊನ್ನಾವರ ಪೋರ್ಟ್ ಪ್ರೖೆವೇಟ್ ಲಿಮಿಟೆಡ್ ಸಹಭಾಗಿತ್ವದಲ್ಲಿ ವಾಣಿಜ್ಯ ಬಂದರು ನಿರ್ವಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಭಾನುವಾರ ಜರುಗಿದ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕಾಸರಕೋಡ ಭಾಗದ ಮೀನುಗಾರ ಮುಖಂಡರೊಂದಿಗೆ ಸಭೆಯಲ್ಲಿ ಮಾತನಾಡಿದರು.

    ಮೀನುಗಾರರ ಹಿತಕಾಯುವುದು ನನ್ನ ಉದ್ದೇಶವಾಗಿದೆ. ಇದಕ್ಕೆ ಸರ್ಕಾರವು ಬದ್ಧವಾಗಿದ್ದು, ಕೆಲವೇ ದಿನಗಳಲ್ಲಿ ಅಧಿಕಾರಿಗಳ ತಂಡದೊಂದಿಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಲಾಗುವುದು. ಸ್ಥಳೀಯ ಮೀನುಗಾರ ಹಾಗೂ ಮುಖಂಡರೊಂದಿಗೆ ರ್ಚಚಿಸುತ್ತೇನೆ ಎಂದು ತಿಳಿಸಿದರು.

    ಮನ ಒಲಿಸುವ ಯತ್ನ: ಬಂದರು ನಿರ್ವಣದ ಬಗೆಗೆ ಸ್ಥಳೀಯರಲ್ಲಿ ಇದ್ದ ಕೆಲವೊಂದು ಗೊಂದಲಗಳ ಕುರಿತು ಹಲವು ಸುತ್ತಿನ ಚರ್ಚೆಯ ಬಳಿಕ ಮೀನುಗಾರರ ಮನ ಒಲಿಸುವ ಪ್ರಯತ್ನವನ್ನು ಸಚಿವರು ಮಾಡಿದರು.

    ಶಾಸಕ ಸುನೀಲ ನಾಯ್ಕ, ಜಿಲ್ಲಾಧಿಕಾರಿ ಮುಲೈಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ, ಭಟ್ಕಳ ಡಿಎಸ್​ಪಿ ಬೆಳ್ಳಿಯಪ್ಪ, ಹೊನ್ನಾವರ ಪಿಐ ಶ್ರೀಧರ ಎಸ್.ಆರ್., ಬಂದರು ಅಧಿಕಾರಿ ಕ್ಯಾಪ್ಟನ್ ಸ್ವಾಮಿ, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ನಾಗರಾಜ್, ಕಂಪನಿಯ ಮುಖ್ಯಕಾರ್ಯನಿರ್ವಹಕ ಸೂರ್ಯಪ್ರಕಾಶ ಗುತ್ತಾ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts