More

    ಮೀನುಗಾರಿಕೆಗೆ ಪೂರಕ ವಾತಾವರಣ ನಿರ್ಮಾಣ

    ಭಟ್ಕಳ: ಕರ್ನಾಟಕ ಕರಾವಳಿಯ ಮೀನುಗಾರಿಕೆಗೆ ಉತ್ತೇಜನ ನೀಡಿ ಪೂರಕ ಪರಿಸರ ಒದಗಿಸಿದಲ್ಲಿ ಕರಾವಳಿಯ ಆರ್ಥಿಕತೆ ಮೇಲೆ ಬಹುದೊಡ್ಡ ಪರಿಣಾಮ ಬೀರಲಿದೆ ಎನ್ನುವ ದಿಸೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಭಿವೃದ್ಧಿಗೆ ಪಣತೊಟ್ಟಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
    ಗೋರ್ಟೆಯ ಕಿರುಹೊಳೆಯಲ್ಲಿ 13 ಕೋಟಿ ರೂ. ವೆಚ್ಚದ ಗ್ರಾಮ ಸಡಕ್ ಯೋಜನೆಗೆ ಶುಕ್ರವಾರ ಶಂಕುಸ್ಥಾಪನೆ ಮಾಡಿ ಅವರು ಮಾತನಾಡಿದರು.ಭಟ್ಕಳದಲ್ಲಿ ಕೋಟ್ಯಂತರ ವೆಚ್ಚದಲ್ಲಿ ಫಿಶ್ ಲ್ಯಾಂಡಿಂಗ್ ಮಾಡಲು ಯೋಜನೆ ಸಿದ್ಧವಾಗಿದೆ ಎಂದರು.
    ಜಿಲ್ಲೆಯಲ್ಲಿ ಇ-ಸ್ವತ್ತು ಸಮಸ್ಯೆಯಿಂದ ಪಟ್ಟಾ ವಿತರಣೆಗೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ರ್ಚಚಿಸಿದ್ದು, ಮನೆ ಕಟ್ಟಿಕೊಂಡಿರುವ 6 ರಿಂದ 7 ಲಕ್ಷ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಬಡವರಿಗೆ ಬಿಟ್ಟುಕೊಡಬೇಕು ಎಂದು ಸರ್ಕಾರ ತೀರ್ವನಿಸಿದೆ ಎಂದರು. ಜಿಲ್ಲೆಯ ಇ -ಸ್ವತ್ತಿನ ಸಮಸ್ಯೆಯನ್ನು ಇದೇ ವ್ಯಾಪ್ತಿಯ ಒಳಗೆ ತಂದು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದರು.
    ಕೇಂದ್ರ ಮಾಜಿ ಸಚಿವ ಅನಂತಕುಮಾರ ಹೆಗಡೆ, ಭಟ್ಕಳ ಶಾಸಕ ಸುನೀಲ ನಾಯ್ಕ ಮಾತನಾಡಿದರು. ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ವೆಂಕಟೇಶ ನಾಯ್ಕ, ಕಾರ್ಯದರ್ಶಿ ಗೋವಿಂದ ನಾಯ್ಕ, ಭಟ್ಕಳ ಉಪವಿಭಾಗಾಧಿಕಾರಿ ಮಮತಾ ದೇವಿ, ತಹಸೀಲ್ದಾರ್ ರವಿಚಂದ್ರ ಎಸ್, ರಾಜ್ಯದ ಖಾದಿ ಗ್ರಾಮೋದ್ಯೋಗ ನಿಗಮದ ಸದಸ್ಯ ಮುಕುಂದ ನಾಯ್ಕ, ಬಿಜೆಪಿ ಭಟ್ಕಳ ಘಟಕ ಅಧ್ಯಕ್ಷ ಸುಬ್ರಾಯ ದೇವಾಡಿಗ, ಯಲ್ವಡಿಕವೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷೀನಾರಾಯಣ ನಾಯ್ಕ, ಶಿವಾನಿ ಶಾಂತರಾಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts