More

    ಮೀಸಲಾತಿ ಕಲ್ಪಿಸಲು ಆಗ್ರಹ

    ಬಾಗಲಕೋಟೆ: ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಮೂಲಕ ಮೀಸಲಾತಿಯನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಮಹರ್ಷಿ ಭಗೀರಥ ಜಿಲ್ಲಾ ಉಪ್ಪಾರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಉಪ್ಪಾರ ಸಮಾಜದವರು ಜಿಲ್ಲಾಡಳಿತ ಭವನ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
    ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
    ಮಹರ್ಷಿ ಭಗೀರಥ ಜಿಲ್ಲಾ ಉಪ್ಪಾರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ ಚೌರಿ ಮಾತನಾಡಿ, ಉಪ್ಪಾರ ಸಮಾಜವರು ರಾಜ್ಯದಲ್ಲಿ ೫೦ ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ರಾಜಕೀಯ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿದೆ. ಸಮಾಜವನ್ನು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಸಾಕಷ್ಟು ಬಾರಿ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಗ್ರಹಿಸಿದರು.
    ೨೦೦೬ ರಲ್ಲಿ ಮುಖ್ಯಮಂತ್ರಿಯಾಗಿದ್ದು ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಹಾಗೂ ೨೦೧೭ ರಲ್ಲಿ ಮುಖ್ಯ ಮಂತ್ರಿಯಾಗಿದ್ದ ಸಿದ್ಧರಾಮಯ್ಯನವರು ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಭರವಸೆ ಇದುವರೆಗೂ ಈಡೇರಿಲ್ಲ. ಅನೇಕ ಜಾತಿಗಳನ್ನು ಪರಿಶಿಷ್ಟ ಜಾತಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಉಪ್ಪಾರ ಸಮಾಜಕ್ಕೆ ಮಾತ್ರ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
    ಉಪ್ಪಾರ ಸಮಾಜದ ಉಪ ಜಾತಿಗಳಾದ ಕೂಸರು, ಮೆಂಡಾಲರು, ಭಟದಾ ಮತ್ತು ಮಹರಾ ಜಾರಿಗಳು, ಕಾರವಾರ, ಮಂಗಳೂರ, ಉಡುಪಿ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದು, ಈಗಾಗಲೇ ಅವರನ್ನು ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲಾಗಿದೆ. ಚನ್ನಪ್ಪ ರೆಡ್ಡಿ, ಹಾವನೂರ ಆಯೋಗಗಳು ಸಮೀಕ್ಷೆ ಮಾಡಿ ನೈಜ ವರದಿ ನೀಡಿವೆ. ಆದರೆ ಉಪ್ಪಾರ ಜಾತಿಯನ್ನು ಮಾತ್ರ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಕ್ಕೆ ಸೇರಿಸದೇ ಇರುವುದು ದುರದೃಷ್ಟಕರ ಸಂಗತಿ ಎಂದ ಅವರು, ಬೇಡಿಕೆ ಈಡೇರಿಸದೇ ಹೋದಲ್ಲಿ ಉಗ್ರ ಪ್ರತಿಭಟನೆ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.
    ಪರಪ್ಪ ಬ್ಯಾಕೋಡ, ಬಸವರಾಜ ಲಾಯನ್ನವರ, ಗುರುರಾಜ ಕೋಟ್ಯಾಳ, ತಿಪ್ಪಣ್ಣ ತಿಪ್ಪಣ್ಣವರ, ಬಾಪು ಲೋನಾರಿ, ಎಸ್.ಬಿ.ಪ್ರಧಾನಿ, ಸಿದ್ದು, ವೈ.ಜಿ,ಸಂಗಮೇಶ ಉಪ್ಪಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts