More

    ಮೀಸಲಾತಿ ಹೆಚ್ಚಳ ಶ್ರೀಗಳ ಶ್ರಮದ ಫಲ

    ಹನೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಸರ್ಕಾರ ಹೆಚ್ಚಿಸಿರುವುದು ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ಹೋರಾಟದ ಪ್ರತಿಫಲವಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

    ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಭಾನುವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಎಸ್ಸಿ, ಎಸ್ಟಿ ಸಮುದಾಯಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ವರದಿಯನ್ನು ಅನುಷ್ಠಾನಗೊಳಿಸುವಂತೆ 241 ದಿನಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಿರತರಾಗಿದ್ದರು. ಆದರೆ, ಸರ್ಕಾರ ಈ ಬಗ್ಗೆ ಪರಿಗಣನೆಗೆ ತೆಗೆದುಕೊಂಡಿರಲಿಲ್ಲ. ಇದೀಗ ಸರ್ಕಾರ ಶ್ರೀಗಳ ಒತ್ತಡಕ್ಕೆ ಮಣಿದು ಎಸ್ಸಿ ಸಮುದಾಯದ ಮೀಸಲಾತಿಯನ್ನು ಶೇ.2ರಷ್ಟು ಹಾಗೂ ಎಸ್ಟಿ ಮೀಸಲಾತಿಯನ್ನು ಶೇ.4ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಆದರೆ, ಈ ನಿರ್ಧಾರವನ್ನು ಸಂವಿಧಾನದ ಪರಿಚ್ಛೇದ 9ರಲ್ಲಿ ಸೇರ್ಪಡೆಗೊಳಿಸುವುದರ ಮೂಲಕ ಆದಷ್ಟು ಬೇಗ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

    ಶ್ರೇಷ್ಠ ದಾರ್ಶನಿಕ: ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣವು ಹಿಂದು ಧರ್ಮದ ಪವಿತ್ರ ಗ್ರಂಥವಾಗಿದೆ. ಸಮಾಜದಲ್ಲಿ ಸುಂಸ್ಕೃತ ವ್ಯಕ್ತಿಯಾಗಿ ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಹಲವು ಆದರ್ಶಗಳನ್ನು ಒಳಗೊಂಡಿದೆ. ಹಾಗಾಗಿ ಮಾನವ ಕುಲಕ್ಕೆ ಇಂತಹ ಮಹಾಕಾವ್ಯವನ್ನು ನೀಡಿದ ಮಹರ್ಷಿಗಳು ಶ್ರೇಷ್ಠ ದಾರ್ಶನಿಕರಾಗಿದ್ದಾರೆ. ಜಯಂತಿ ಆಚರಿಸಿದರೆ ಸಾಲದು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡಾಗ ಮಾತ್ರ ಸಾರ್ಥಕತೆ ಎನಿಸುತ್ತದೆ ಎಂದು ತಿಳಿಸಿದರು.

    ಪಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ತಹಸೀಲ್ದಾರ್ ಆನಂದಯ್ಯ, ತಾಪಂ ಇಒ ಶ್ರೀನಿವಾಸ್, ಬಿಇಒ ಶಿವರಾಜು ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ, ಶಿಕ್ಷಣ ಸಂಯೋಜಕ ಕಿರಣ್‌ಕುಮಾರ್, ಶಿರಸ್ತೇದಾರ್ ನಾಗೇಂದ್ರ, ಪಪಂ ಮುಖ್ಯಾಧಿಕಾರಿ ಪರಶಿವಯ್ಯ, ಗ್ರಾಮಲೆಕ್ಕಿಗ ಶೇಷಣ್ಣ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts