More

    ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಣೆ ಅಗತ್ಯ


    ಯಾದಗಿರಿ: ಮನುಷ್ಯನ ಅತೀಯಾದ ಸ್ವಾರ್ಥದಿಂದ ಇಂದು ಕಾಡುಗಳು ನಾಶವಾಗುತ್ತಿದ್ದು, ಅಮೂಲ್ಯವಾದ ಪ್ರಾಕೃತಿಕ ಸಂಪತ್ತು ಕಣ್ಮರೆಯಾಗುತ್ತಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ ಕಳವಳ ವ್ಯಕ್ತಪಡಿಸಿದರು.

    ಸೋಮವಾರ ನಗರದ ಲುಂಬಿನಿ ವನದಲ್ಲಿ ಜಿಲ್ಲಾಡಳಿತ, ಜಿಪಂ, ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ. ಪರಿಸರ ದಿನದಂದು ಪ್ರತಿಯೊಬ್ಬರೂ ಈ ಬಗ್ಗೆ ದೃಢ ಸಂಕಲ್ಪ ಮಾಡಿ, ಕನಿಷ್ಠ ಒಂದು ಕುಟುಂಬದಿಂದ ಒಂದು ಗಿಡ ನೆಟ್ಟು ಬೆಳೆಸಬೇಕು ಎಂದು ಸಲಹೆ ನೀಡಿದರು.

    ಗಿಡಮರಗಳನ್ನು ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಗಿಡ ಬೆಳೆಸೋದು ನಾಶ ಮಾಡಿದಷ್ಟು ಸುಲಭವಲ್ಲ. ಹಾಗಾಗಿ ನಾವು ಎಷ್ಟು ಮರಗಳು ಉಳಿಸಿ ಬೆಳೆಸುತ್ತೇವೆ ಎಂಬುದು ಬಹಳ ಮುಖ್ಯ. ನಮ್ಮ ಜಿಲ್ಲೆಯಲ್ಲಿ ಅತೀ ಹೆಚ್ಚು ಬಿಸಿಲಿನ ತಾಪಮಾನ ಏರಿಕೆಯಾಗಿದೆ. ಇದನ್ನು ಕಡಿಮೆ ಮಾಡಬೇಕೆಂದರೆ ಹಸಿರು ಪರಿಸರ ನಿಮರ್ಾಣವಾಗಬೇಕು. ಇದಕ್ಕೆ ಯುವ ಪೀಳಿಗೆ ಇಂದಿನಿಂದಲೇ ದೃಢ ಸಂಕಲ್ಪ ಮಾಡಬೇಕು ಎಂದರು.

    ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಮಾತನಾಡಿ, ಗಿಡಮರಗಳನ್ನು ನೆಡುವುದರ ಜತೆಗೆ ಪೋಷಣೆ ಮಾಡುವುದು ಬಹಳ ಮುಖ್ಯವಾಗಿದೆ. ಎಲ್ಲ ವಿದ್ಯಾಥರ್ಿಗಳು ಅಭ್ಯಾಸದ ಜತೆಗೆ ಪರಿಸರ ರಕ್ಷಣೆಗೆ ಸಮಯ ಮೀಸಲಿಟ್ಟು ಮಾದರಿಯಾಗಬೇಕು. ಪರಿಸರ ದಿನ ವರ್ಷಕ್ಕೊಂದು ದಿನಕ್ಕೆ ಸೀಮಿತವಾಗಬಾರದು. ಪ್ರತಿದಿನವೂ ಸಹ ನಡೆಯಬೇಕು ಎಂದು ತಿಳಿಸಿದರು.

    ಜಿಲ್ಲಾಕಾರಿ ಸ್ನೇಹಲ್ ಆರ್., ಪ್ಲಾಸ್ಟಿಕ್ ಮಾಲಿನ್ಯವನ್ನು ಸೋಲಿಸಿ ಎಂಬುದು ಈ ವರ್ಷದ ಧ್ಯೇಯ ವಾಕ್ಯವಾಗಿದೆ. ಎಲ್ಲ ಕಡೆ ಪ್ಲಾಸ್ಟಿಕ್ ಆವರಿಸಿಕೊಂಡಿದೆ. ಪುನರ್ ಬಳಕೆಯಂತ ಪ್ಲಾಸ್ಟಿಕ್ ವಸ್ತುಗಳನ್ನು ಮರುಬಳಕೆ ಮಾಡಬೇಕು. ಬಿಸಿಲು ಜಾಸ್ತಿ ಇದ್ದರೆ, ನಾವು ನೆರಳನ್ನು ಹುಡುಕಿಕೊಂಡು ಹೋಗುತ್ತೇವೆ. ಆ ನೆರಳು ಬೇಕೆಂದರೆ ಗಿಡಮರಗಳು ಇರಬೇಕು ಎಂದರು.

    ಇದೇ ವೇಳೆ ಅರಣ್ಯ ಇಲಾಖೆಯಿಂದ ಬಟ್ಟೆಯ ಚೀಲಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಪ್ರಬಂಧ ಹಾಗೂ ಚಿತ್ರಕಲೆ ಸ್ಪಧರ್ೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಯಿತು. ಶ್ರೀಸಾಯಿ ಜನಜಾಗೃತಿ ಕಲಾ ಸಂಘದವರು ಬೀದಿ ನಾಟಕ ಪ್ರದಶರ್ಿಸಿದರು. ಇದಕ್ಕೂ ಮುನ್ನ ಪ್ರಾದೇಶಿಕ ಅರಣ್ಯ ಇಲಾಖೆ ಕಚೇರಿಯಿಂದ ಲುಂಬಿನಿ ವನದ ವರೆಗೆ ಪರಿಸರ ಸಂರಕ್ಷಣಾ ಜಾಗೃತಿ ಜಾಥಾ ನಡೆಯಿತು.

    ಶಾಸಕ ರಾಜಾ ವೆಂಕಟಪ್ಪನಾಯಕ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಕಾರಿ ಕಾಜೋಲ್ ಅಜೀತ್ ಪಾಟೀಲ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಕಾರಿ ಎನ್.ಕೆ.ಬಾಗಾಯತ, ಪ್ರಾಚಾರ್ಯ ಪ್ರೋ.ಸುಭಾಶ್ವಂದ್ರ ಕೌಲಗಿ, ಕೈಗಾರಿಕಾ ಇಲಾಖೆ ಜಂಟಿ ನಿದರ್ೇಶಕಿ ರೇಖಾ ಮ್ಯಾಗೇರಿ, ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಡಾ. ಪುಷ್ಪಾವತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕಿ ಉತ್ತರಾದೇವಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts