More

    ಮುಂದುವರಿದ ಸಿಬಿಐ ತನಿಖೆ

    ಧಾರವಾಡ: ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೆಲ ದಿನಗಳಿಂದ ನಗರದಲ್ಲಿ ಬೀಡು ಬಿಟ್ಟಿರುವ ಸಿಬಿಐ ಅಧಿಕಾರಿಗಳು ಶುಕ್ರವಾರ ಕೆಲವರನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ.

    ಗುರುವಾರ ವಿಚಾರಣೆಗೆ ಒಳಪಟ್ಟಿದ್ದ ಯೋಗೀಶಗೌಡ ಪತ್ನಿ ಮಲ್ಲಮ್ಮ, ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಅವರನ್ನು ಶುಕ್ರವಾರವೂ ಕರೆಸಿ ವಿಚಾರಣೆಗೆ ಒಳಪಡಿಸಿದರು. ಇದಲ್ಲದೆ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಸೇರಿ ಇನ್ನೂ ಕೆಲವರನ್ನು ಕರೆಸಿ ತೀವ್ರ ವಿಚಾರಣೆಗೆ ಒಳಪಡಿಸಿ ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.

    ಈ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿಯನ್ನು ಈಗಾಗಲೇ ಸಿಬಿಐ ಅಧಿಕಾರಿಗಳು ಅನೇಕ ಬಾರಿ ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆದಿದ್ದಾರೆ. ಇನ್ನು ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಅವರು ಮಲ್ಲಮ್ಮ ಗೌಡರ ಕಾಂಗ್ರೆಸ್ ಸೇರಲು ಸಹಾಯ ಮಾಡಿದ್ದರು ಎಂಬ ಕಾರಣಕ್ಕೆ ವಿಚಾರಣೆಗೆ ಒಳಪಡಿಸಲಾಗಿದೆ. ಗುರುವಾರ ಸಂಜೆವರೆಗೂ ವಿಚಾರಣೆ ಎದುರಿಸಿದ್ದ ಕರಿಗಾರ ಅವರಿಂದ ಇನ್ನಷ್ಟು ಮಾಹಿತಿ ಕಲೆ ಹಾಕುವ ಹಿನ್ನೆಲೆಯಲ್ಲಿ ಶುಕ್ರವಾರವೂ ಹಾಜರಾಗುವಂತೆ ಸೂಚಿಸಿದ್ದರು ಎನ್ನಲಾಗಿದೆ.

    ಇದಲ್ಲದೆ ಹಾಲಿ-ಮಾಜಿ ಶಾಸಕರ ಜತೆಗೆ ಒಡನಾಟ ಹೊಂದಿದವರು, ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವರನ್ನು ಸಹ ಕರೆಯಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಶುಕ್ರವಾರ ವಿಚಾರಣೆಗೆ ಆಗಮಿಸಿದವರಲ್ಲಿ ಬಹುತೇಕರನ್ನು ಶನಿವಾರವೂ ಕರೆಯಿಸಿ ಮತ್ತೆ ತನಿಖೆಗೆ ಒಳಪಡಿಸುವ ಸಾಧ್ಯತೆ ಇದೆ.

    ವಿಚಾರಣೆ ಬಳಿಕ ಹೊರಬಂದ ಶಿವಾನಂದ ಕರಿಗಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಗುರುವಾರ ವಿಚಾರಣೆ ಸಂದರ್ಭದಲ್ಲಿ ಕೆಲವ ವಿಷಯಗಳು ಉಳಿದಿದ್ದವು. ಹೀಗಾಗಿ ಮತ್ತೆ ಕರೆಯಿಸಿದ್ದರು. ಮಲ್ಲಮ್ಮರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳುವುದಕ್ಕೆ ಸಂಬಂಧಿಸಿ ಆಗ ಸಚಿವರಾಗಿದ್ದ ವಿನಯ ಕುಲಕರ್ಣಿ ಅವರನ್ನು ಭೇಟಿ ಮಾಡಿಸಿದ್ದೆ ಹೊರತು, ಉಳಿದ ಯಾವ ವಿಷಯವೂ ನನಗೆ ಗೊತ್ತಿಲ್ಲ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts