More

    ಮುತಗಾ ಆರೋಗ್ಯಾಧಿಕಾರಿ ವರ್ಗಾವಣೆಗೊಳಿಸಿ

    ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿ ಗುರುವಾರ ಮುತಗಾ ಗ್ರಾಪಂ ಸದಸ್ಯರು, ಗ್ರಾಮಸ್ಥರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ವೈದ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು. ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವ ಬಡವರಿಗೆ, ಕೂಲಿ ಕಾರ್ಮಿಕರಿಗೆ ಗುಣಮಟ್ಟದ ಆರೋಗ್ಯ ಸೌಲಭ್ಯಗಳು, ತುರ್ತು ಚಿಕಿತ್ಸೆ ಸಿಗುತ್ತಿಲ್ಲ.

    ದೂರದ ಊರುಗಳಿಂದ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಸ್ಪಂದಿಸುತ್ತಿಲ್ಲ. ಕುಂಟುನೆಪ ಹೇಳಿಕೊಂಡು ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಕಳುಹಿಸಿಕೊಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆ ಇದ್ದರೂ ಜನರಿಗೆ ಪ್ರಯೋಜನವಾಗುತ್ತಿಲ್ಲ. ಹಾಗಾಗಿ, ಕೂಡಲೇ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯನ್ನು ವರ್ಗಾವಣೆಗೊಳಿಸಿ ಬೇರೆ ವೈದ್ಯಾಧಿಕಾರಿ ನಿಯೋಜನೆ ಮಾಡಬೇಕು ಎಂದು ಆಗ್ರಹಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯು ಸಮಯಕ್ಕೆ ಸರಿಯಾಗಿ ಆಸ್ಪತ್ರಗೆ ಬರುವುದಿಲ್ಲ.

    ಆಸ್ಪತ್ರೆಯಲ್ಲಿ ಔಷಧ ಸೇರಿ ಎಲ್ಲ ರೀತಿಯ ಸೌಲಭ್ಯಗಳಿವೆ. ಆದರೆ, ರೋಗಿಗಳಿಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ. ತುರ್ತು ಸಂದರ್ಭದಲ್ಲಿ ಕೂಡ ಚಿಕಿತ್ಸೆ ನೀಡಲು ಆಸ್ಪತ್ರೆಗೆ ಬರುತ್ತಿಲ್ಲ. ಇದರಿಂದ ತೀವ್ರ ಸಮಸ್ಯೆ ಉಂಟಾಗಿದ್ದು, ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ವೈದ್ಯಾಧಿಕಾರಿಯನ್ನು ವರ್ಗಾವಣೆಗೊಳಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಗ್ರಾಪಂ ಸದಸ್ಯರು ಎಚ್ಚರಿಸಿದರು. ಕಿರಣ ಪಾಟೀಲ, ಬಾಲಚಂದ್ರ ಪಾಟೀಲ, ಸತೀಶ ಶಹಾಪುರಕರ, ಮಿಲನ ಮಾತಾರಿ, ರೇಖಾ ಮೋದಗಿಕರ್, ಎಲ್.ಎಲ್.ಕೋಲಕಾರ, ಗ್ರಾಪಂ ಸದಸ್ಯರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts